ದೇಶ

ಜ್ವರದಿಂದ ಬಳಲುತ್ತಿರುವ ರಾಹುಲ್ ಗಾಂಧಿ; ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ಹಾರೈಕೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜ್ವರ ಇನ್ನೂ ಕಡಿಮೆಯಾಗಿಲ್ಲ. ಅವರು ಶೀಘ್ರ ಗುಣಮುಖರಾಗುವಂತೆ...

ಜ್ವರದಿಂದ ಬಳಲುತ್ತಿರುವ ರಾಹುಲ್ ಗಾಂಧಿ; ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ಹಾರೈಕೆ
ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
Published On :

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜ್ವರ ಇನ್ನೂ ಕಡಿಮೆಯಾಗಿಲ್ಲ. ಅವರು ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ ಎಂದು ಆರೋಗ್ಯ ಸಚಿವ ಜೆ.ಪಿ.ನಡ್ಡಾ ತಿಳಿಸಿದರು.

ಟ್ವೀಟ್ ಮಾಡಿರುವ ಅವರು, ಕಳೆದೊಂದು ವಾರದಿಂದ ತೀವ್ರ ಜ್ವರದಿಂದ ರಾಹುಲ್ ಗಾಂಧಿಯವರು ಬಳಲುತ್ತಿದ್ದಾರೆ ಎಂದು ಪ್ರಧಾನಿಯವರಿಂದ ಗೊತ್ತಾಯಿತು. ಅವರು ಶೀಘ್ರ ಗುಣಮುಖರಾಗುವಂತೆ ಅವರು ಹಾರೈಸಿದ್ದಾರೆ ಎಂದು ಹೇಳಿದ್ದಾರೆ.

ಅಸೌಖ್ಯದ ಕಾರಣ ಕಳೆದ ವಾರ ರಾಹುಲ್ ಗಾಂಧಿ, ಪುದುಚೆರಿ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣಾ ರ್ಯಾಲಿಗಳನ್ನು ರದ್ದುಪಡಿಸಿದ್ದರು. ಅವರು ವೈರಲ್ ಜ್ವರದಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.