ಚೆನ್ನೈ, ಕರಾವಳಿ ತೀರದಲ್ಲಿ ಕುಂಭದ್ರೋಣ ಮಳೆ: ಚಂಡಮಾರುತ ಭೀತಿ
ಕಳೆದ ವರ್ಷ ಸುರಿದ ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ಅಕ್ಷರಶಃ ನಲುಗಿದ್ದು, ಇದೀಗ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈ ನಲ್ಲಿ ಮತ್ತೆ ಪ್ರವಾಹ ಭೀತಿ...

ಚೆನ್ನೈ: ಕಳೆದ ವರ್ಷ ಸುರಿದ ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ಅಕ್ಷರಶಃ ನಲುಗಿದ್ದು, ಇದೀಗ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈ ನಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ.
ಚೈನ್ನೈ ಸೇರಿದಂತೆ ಕರಾವಳಿ ತೀರದಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಇದೀಗ ಚಂಡಮಾರುತ ಭೀತಿ ಶುರುವಾಗಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಚೆನ್ನೈನಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಭೀತಿ ಶುರುವಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚೆನ್ನೈನಿಂದ ಆಂಧ್ರ ಕರಾವಳಿ ತೀರದೆಡೆಗೆ ಚಂಡಮಾರುತ ಸಾಗುತ್ತಿದ್ದು ಆಂಧ್ರದ ಕರಾವಳಿ ತೀರಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಎಡ ಬಿಡದೆ ಸುತ್ತಿರುವ ಮಳೆಯಿಂದಾಗಿ ಚೆನ್ನೈನಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ ಇದರಿಂದಾಗಿ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ 56 ವಿಮಾನಗಳ ಹಾರಾಟದಲ್ಲಿ ಬದಲಾವಣೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


