ದೇಶ

ಸುಬ್ರಮಣಿಯನ್ ಸ್ವಾಮಿ ಟಾರ್ಗೆಟ್ ಅರುಣ್ ಜೈಟ್ಲಿ, ರಾಜನ್ ನೆಪಮಾತ್ರ : ಕಾಂಗ್ರೆಸ್

ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ...

ಸುಬ್ರಮಣಿಯನ್ ಸ್ವಾಮಿ ಟಾರ್ಗೆಟ್ ಅರುಣ್ ಜೈಟ್ಲಿ, ರಾಜನ್ ನೆಪಮಾತ್ರ : ಕಾಂಗ್ರೆಸ್
ಸುಬ್ರಮಣಿಯನ್ ಸ್ವಾಮಿ
Published On :

ನವದೆಹಲಿ: ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಮೈನ್ ಟಾರ್ಗೆಟ್, ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಕೇವಲ ನೆಪಮಾತ್ರ ಎಂದು ಕಾಂಗ್ರೆಸ್ ಆರೋಪಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮಾನಸಿಕವಾಗಿ ಸಂಪೂರ್ಣವಾಗಿ ಭಾರತೀಯರಾಗಿಲ್ಲವಾದ್ದರಿಂದ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್ ಸುಬ್ರಮಣಿಯನ್ ಸ್ವಾಮಿಯವರಿಗೆ ನಿಜವಾದ ಟಾರ್ಗೆಟ್ ಜೇಟ್ಲಿ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಕೇವಲ ನೆಪ ಮಾತ್ರ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
 
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ದೇಶದ ಆರ್ಥಿಕತೆಯನ್ನು ಉದ್ದೇಶಪೂರ್ವಕಾಗಿ ಕುಂಠಿತಗೊಳಿಸಲು ಪ್ರಯತ್ನಿಸುತ್ತಿರುವುದರಿಂದ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಪ್ರಧಾನಿ ಮೋದಿಯವರಿಗೆ ಎರಡು ಪುಟಗಳ ಪತ್ರ ಬರೆದಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.