ದೇಶ

ವಿಧಾನಸಭಾ ಚುನಾವಣೆ: ಕೇರಳ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್ ಮುಗ್ಗರಿಸಿ ಬೀಳಲು ಕಾರಣವೇನು?

ಕೇರಳದಲ್ಲಿ ಅಧಿಕಾರದಲ್ಲಿದ್ದ ಯುಡಿಎಫ್ ಸರ್ಕಾರ ಅಧಿಕಾರವಧಿಯಲ್ಲಿ ಮಾಡಿದ ಹಗರಣಗಳಿಂದಲೇ ಈ ಬಾರಿ ಸ್ಥಾನ ಕಳೆದುಕೊಂಡಿದೆ...

ವಿಧಾನಸಭಾ ಚುನಾವಣೆ: ಕೇರಳ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್ ಮುಗ್ಗರಿಸಿ ಬೀಳಲು ಕಾರಣವೇನು?
ಕಾಂಗ್ರೆಸ್‌
Published On :
ನವದೆಹಲಿ: ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಮುಖಭಂಗವುಂಟಾಗಿದೆ. ಈ ಹಿಂದೆ ಅಸ್ಸಾಂ ಮತ್ತು ಕೇರಳದಲ್ಲಿ ಅಧಿಕಾರದ ಚಲಾಯಿಸಿದ್ದ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಮುಗ್ಗರಿಸಿ ಬಿದ್ದಿದೆ.
ಈಗಾಗಲೇ ಪ್ರಸ್ತುತ ಪಕ್ಷ ಹರ್ಯಾಣ, ಮಹಾರಾಷ್ಟ್ರ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರದಲ್ಲಿ  ಸ್ಥಾನಗಳನ್ನು ಕಳೆದುಕೊಳ್ಳುವ ಮೂಲಕ ಮಂಕಾಗಿದೆ.
ಇತ್ತ ಪಶ್ಚಿಮ ಬಂಗಾಳದಲ್ಲಿ ಎಡರಂಗದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರೂ, ಮಮತಾ ಬ್ಯಾನರ್ಜಿಯವರ ಟಿಎಂಸಿ ಅಲೆಯೊಂದಿಗೆ ಗುದ್ದಾಡಲು ಸಾಧ್ಯವಾಗಲಿಲ್ಲ.
ಕೇರಳದಲ್ಲಿ ಅಧಿಕಾರದಲ್ಲಿದ್ದ ಯುಡಿಎಫ್ ಸರ್ಕಾರ ಅಧಿಕಾರವಧಿಯಲ್ಲಿ ಮಾಡಿದ ಹಗರಣಗಳಿಂದಲೇ ಈ ಬಾರಿ ಸ್ಥಾನ ಕಳೆದುಕೊಂಡಿದೆ.
ಆದಾಗ್ಯೂ, ಕಾಂಗ್ರೆಸ್ ನಾಯಕತ್ವದಲ್ಲಿನ ದೋಷಗಳೇ ಈ ಸೋಲುಗಳಿಗೆ ಕಾರಣ ಎಂದು ಹೇಳಬಹುದು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯುವಜನತೆಯನ್ನು ಕಾಂಗ್ರೆಸ್‌ನತ್ತ ಸೆಳೆಯಲು ಯತ್ನಿಸಿದರೂ ಅವರ ಪ್ರಯತ್ನಗಳು ಯಾವುದೂ ಸಫಲತೆ ಕಾಣಲೇ ಇಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.