ಪಶ್ಚಿಮ ಬಂಗಾಳದಲ್ಲಿ ಸ್ಪಷ್ಟ ಬಹುಮತದತ್ತ ತೃಣಮೂಲ ಕಾಂಗ್ರೆಸ್
ನಿರೀಕ್ಷೆಯಂತೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಸತತ...

ಕೋಲ್ಕತ್ತಾ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಪಶ್ಚಿಮ ಬಂಗಾಳದ ಮತದಾರರು ಕೈ ಹಿಡಿದಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭೆ 294 ಕ್ಷೇತ್ರಗಳನ್ನು ಒಳಗೊಂಡಿದ್ದು, ಅದರಲ್ಲಿ ಟಿಎಂಸಿ ಪಕ್ಷ ಭರ್ಜರಿ 213 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಸಿಪಿಎಂಗೆ ಭಾರಿ ಮುಖಭಂಗವಾಗಿದ್ದು, ಕೇವಲ 71 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಪಡೆದರೆ, 3 ಸ್ಥಾನಗಳಲ್ಲಿ ಇತರರು ಮುನ್ನಡೆ ಪಡೆದಿದ್ದಾರೆ.
ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 148 ಸ್ಥಾನಗಳ ಅವಶ್ಯಕತೆ ಇದ್ದು, ಟಿಎಂಸಿ ಪಕ್ಷ ಅದಾಗಲೇ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


