ಕಾಲೇಜುಗಳಿಂದ ಸರ್ಕಾರ ಆದೇಶ ಉಲ್ಲಂಘನೆ: ವಿವಿಧ ಕೋರ್ಸ್‌ಗಳಿಗಾಗಿ ಹೆಚ್ಚು ಶುಲ್ಕ ವಸೂಲಿ
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ಸೇರಿದಂತೆ ಇತರೆ ಪರೀಕ್ಷೆಗಳ ತರಬೇತಿಗಳನ್ನು ಕಾಲೇಜುಗಳು...

Published On :
ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್) ಸೇರಿದಂತೆ ಇತರೆ ಪರೀಕ್ಷೆಗಳ ತರಬೇತಿಗಳನ್ನು ಕಾಲೇಜುಗಳು ನೀಡುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದರೂ ಲೆಕ್ಕಿಸದ ಕಾಲೇಜುಗಳು ನೀಟ್ ಸೇರಿದಂತೆ ಇತರೆ ಕೋರ್ಸ್ ಗಳಿಗಾಗಿ ಹೆಚ್ಚು ಶುಲ್ಕವನ್ನು ವಸೂಲಿ ಮಾಡುತ್ತಿವೆ.
ಕಾಲೇಜು ಪ್ರವೇಶ ಶುಲ್ಕದ ಜೊತೆಗೆ ನೀಟ್ ಸೇರಿದಂತೆ ಇತರೆ ಕೋರ್ಸ್ ಗಳ ಕೋಚಿಂಗ್ ಗಾಗಿ ರು.20,000ರಿಂದ ರು.25,000 ಶುಲ್ಕವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿವೆ.
ನೀಟ್ ಪರೀಕ್ಷೆ ತರಬೇತಿ ಪಡೆಯಲು ಪ್ರತ್ಯೇಕ ತಂಡಗಳನ್ನು ಮಾಡಲಾಗಿದೆ. ಪ್ರತಿ ತಂಡದಲ್ಲಿ 30 ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಾರೆ. ನೀಟ್ ಪರೀಕ್ಷೆ ತರಬೇತಿ ಪಡೆಯಲು ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿಯಲ್ಲಿ ಶೇ.92ರ ಮೇಲ್ಪಟ್ಟು ಅಂಕಗಳನ್ನು ಪಡೆದಿರಬೇಕು ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ.
ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಈ ಸಂಬಂಧ ವಿಚಾರಿಸಿದಾಗ, ಶೇ.92ಕ್ಕೂ ಕಡಿಮೆ ಅಂಕಗಳನ್ನು ಗಳಿಸಿದ್ದವರಿಗೆ ಕಾಲೇಜಿನಲ್ಲಿ ಪ್ರವೇಶ ನೀಡುವುದಿಲ್ಲ. ಅದರಲ್ಲಿ ಶೇ.90ರಷ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತಶಾಸ್ತ್ರ ತರಗತಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


