ಸ್ವದೇಶಿ ನಿರ್ಮಿತ ಪೃಥ್ವಿ-2 ಕ್ಷಿಪಣಿ ಯಶಸ್ವಿ ಉಡಾವಣೆ
ಸ್ವದೇಶಿ ನಿರ್ಮಿತ ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ...

ಬಾಲಸೋರೆ(ಒಡಿಶಾ): ಸ್ವದೇಶಿ ನಿರ್ಮಿತ ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ 9.40ರ ಸುಮಾರಿಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ. ಕ್ಷಿಪಣಿ ಗುರಿ ತಲುಪಿದ್ದನ್ನು ಭಾರತೀಯ ರಾಡಾರ್‌ಗಳು ಪತ್ತೆ ಮಾಡಿದ್ದು, ವಿಜ್ಞಾನಿಗಳಲ್ಲಿ ಹರ್ಷ ಮೂಡಿಸಿದೆ.
ಪೃಥ್ವಿ-2 ಸಂಪೂರ್ಣ ಸ್ವದೇಶಿ ನಿರ್ಮಿತ ಕ್ಷಿಪಣಿಯಾಗಿದ್ದು, 350 ಕಿಮೀ ವ್ಯಾಪ್ತಿಯ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷಿಪಣಿಯನ್ನು ಕರಾವಳಿ ಭದ್ರತೆಗಾಗಿ ಸಂಶೋಧಿಸಲಾಗಿತ್ತು. ಶತ್ರು ಪಾಳಯದ ನೌಕೆಗಳನ್ನು ಕ್ಷಣಮಾತ್ರದಲ್ಲಿ ಉಡಾಯಿಸಬಲ್ಲ ಸಾಮರ್ಥ್ಯ ಪೃಥ್ವಿ-2 ಕ್ಷಿಪಣಿಗಿದೆ. ಸುಮಾರು 500ರಿಂದ 1 ಸಾವಿರ ಕೆಜಿ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಪೃಥ್ವಿ-2 ಕ್ಷಿಪಣಿಗಿದ್ದು, ಧ್ರವ ಇಂಧನವನ್ನು ಸ್ರವಿಸುವ ಅವಳಿ ಇಂಜಿನ್ ಗಳನ್ನು ಕ್ಷಿಪಣಿ ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


