ಕೇರಳದಲ್ಲಿ ಎಲ್ ಡಿಎಫ್ ವಿಜಯೋತ್ಸವ ವೇಳೆ ಕಚ್ಚಾ ಬಾಂಬ್ ದಾಳಿ, ಓರ್ವ ಸಾವು
ಕೇರಳ ವಿಧಾನಸಭೆ ಚುನಾವಣೆ ಹೊರಬಿಳುತ್ತಿದ್ದಂತೆ ಸಂಭ್ರಮಾಚರಣೆಗಾಗಿ ಬೀದಿಗಿಳಿದ ಸಿಪಿಎಂ, ಬಿಜೆಪಿ ಹಾಗೂ ಐಯುಎಂಎಲ್ ಕಾರ್ಯಕರ್ತರ ಮಧ್ಯ...

Published On :
ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆ ಹೊರಬಿಳುತ್ತಿದ್ದಂತೆ ಸಂಭ್ರಮಾಚರಣೆಗಾಗಿ ಬೀದಿಗಿಳಿದ ಸಿಪಿಎಂ, ಬಿಜೆಪಿ ಹಾಗೂ ಐಯುಎಂಎಲ್ ಕಾರ್ಯಕರ್ತರ ಮಧ್ಯ ಘರ್ಷಣೆ ಸಂಭವಿಸಿದ್ದು, ಈ ವೇಳೆ ದುಷ್ಕರ್ಮಿಯೊಬ್ಬ ಕಚ್ಚಾ ಬಾಂಬ್ ಎಸೆದಿದ್ದು, ಘಟನೆಯಲ್ಲಿ ಓರ್ವ ಸಿಪಿಎಂ ಕಾರ್ಯಕರ್ತ ಮೃತಪಟ್ಟಿದ್ದಾರೆ.
ಧರ್ಮದೊಂ ಕ್ಷೇತ್ರದ ಪಿನಾರಯಿಯಲ್ಲಿ ಈ ಘಟನೆ ನಡೆದಿದ್ದು, ಸಿಪಿಎಂ ಕಾರ್ಯಕರ್ತ ಮೃತಪಟ್ಟಿದ್ದು ಬಾಂಬ್ ದಾಳಿಯಿಂದಲ್ಲ. ಬದಲಾಗಿ ಬಾಂಬ್ ಎಸೆತದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಓಡುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
140 ಸದಸ್ಯ ಬಲವನ್ನು ಹೊಂದಿರುವ ಕೇರಳ ವಿಧಾನಸಭೆಯಲ್ಲಿ ಎಲ್ ಡಿಎಫ್ 90 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


