ದೇಶ

ಮಮತಾ ಬ್ಯಾನರ್ಜಿ: ಫೇಸ್ ಬುಕ್ ನಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ರಾಜಕಾರಣಿ

ಐದು ರಾಜ್ಯಗಳ ಚುನಾವಣಾ ಸಮೀಕ್ಷೆ ನಡೆಸಿದ್ದ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣ...

ಮಮತಾ ಬ್ಯಾನರ್ಜಿ: ಫೇಸ್ ಬುಕ್ ನಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ರಾಜಕಾರಣಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :

ನವದೆಹಲಿ: ಐದು ರಾಜ್ಯಗಳ ಚುನಾವಣಾ ಸಮೀಕ್ಷೆ  ನಡೆಸಿದ್ದ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅತ್ಯಂತ ಹೆಚ್ಚು ಸುದ್ದಿಯಲ್ಲಿದ್ದ ರಾಜಕೀಯ ನಾಯಕರಾಗಿದ್ದರು.

ಪಶ್ಚಿಮ ಬಂಗಾಳ, ಪುದುಚೆರಿ, ಅಸ್ಸಾಂ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಚುನಾವಣೆ ಸಂಬಂಧ ಫೇಸ್ ಬುಕ್ ನಲ್ಲಿ ನಡೆಯುತ್ತಿದ್ದ ಸಂಭಾಷಣೆಗಳ ಬಗ್ಗೆ ವಿಶ್ಲೇಷಣೆ ನಡೆಸಲಾಗಿತ್ತು. ಅದರಲ್ಲಿ ಬಿಜೆಪಿ ಶೇಕಡಾ 62ರಷ್ಟು ತುಂಬಾ ಚರ್ಚೆಯಲ್ಲಿದ್ದ ಪಕ್ಷವಾಗಿದ್ದು, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೆಚ್ಚು ವಿಶ್ಲೇಷಣೆಗೆ ಶೇಕಡಾ 22ರಷ್ಟು ಒಳಗಾದ ರಾಜಕೀಯ ನಾಯಕಿಯಾಗಿದ್ದಾರೆ. ಅವರ ನಂತರದ ಸ್ಥಾನದಲ್ಲಿ ಕೇರಳ ಮುಖ್ಯಮಂತ್ರಿ ಊಮನ್ ಚಾಂಡಿ ಶೇಕಡಾ 20ರಷ್ಟಿದ್ದಾರೆ.

ಕಳೆದ ಫೆಬ್ರವರಿ 12ರಿಂದ ಮೇ 10ರವರೆಗೆ  ಫೇಸ್ ಬುಕ್ ನಲ್ಲಿ ಹೆಚ್ಚು ಚರ್ಚೆ, ವಿಶ್ಲೇಷಣೆಗೆ ಒಳಗಾದ ರಾಜಕೀಯ ಮುಖಂಡರು, ಪಕ್ಷಗಳು, ರಾಜ್ಯಗಳು, ಉನ್ನತ ವಿಷಯಗಳ ಬಗ್ಗೆ ಅಂಕಿಅಂಶಗಳನ್ನು ಸಂಗ್ರಹಿಸಲಾಗಿತ್ತು.

ಚುನಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಚರ್ಚೆ ಮಾಡಲು ಫೇಸ್ ಬುಕ್ ಒಂದು ಉತ್ತಮ ವೇದಿಕೆಯಾಗಿದ್ದು, ನಿಜವಾದ ಪರಿಣಾಮ ಬೀರಿದೆ. ಇದು ತಮ್ಮ ಪ್ರತಿನಿಧಿಯ ಬಗ್ಗೆ ಜನರಿಗೆ ಸರಿಯಾಗಿ ಚರ್ಚೆ ನಡೆಸಲು ಮತ್ತು ತಮಗೆ ಸಂಬಂಧಿಸಿದ ವಿಷಯಗಳ ಚರ್ಚೆ ನಡೆಸಲು ಅವಕಾಶ ಮಾಡಿಕೊಡುತ್ತದೆ ಎನ್ನುತ್ತಾರೆ ಫೇಸ್ ಬುಕ್ ವಕ್ತಾರರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.