ದೇಶ

ನನ್ನ ಗೆಲುವು ಕೇರಳದಲ್ಲಿ ಬಿಜೆಪಿ ಉದಯದ ಸಂಕೇತ: ಒ.ರಾಜಗೋಪಾಲ್

ಕೇರಳದಲ್ಲಿ ಬಿಜೆಪಿ ಪಕ್ಷ ತನ್ನ ಖಾತೆಯನ್ನು ತೆರೆಯಲು ಕಾರಣರಾಗಿರುವ ಬಿಜೆಪಿ ನಾಯಕ ರಾಜಗೋಪಾಲ್ ತಮ್ಮ ಗೆಲುವಿನ ಬಗ್ಗೆ ಮಾಧ್ಯಮಗಳಿಗೆ ಪ್ರರಿಕ್ರಿಯೆ ನೀಡಿದ್ದಾರೆ.

ನನ್ನ ಗೆಲುವು ಕೇರಳದಲ್ಲಿ ಬಿಜೆಪಿ ಉದಯದ ಸಂಕೇತ: ಒ.ರಾಜಗೋಪಾಲ್
ಕೇರಳದ ಮೊದಲ ಬಿಜೆಪಿ ಶಾಸಕ ಒ.ರಾಜಗೋಪಾಲ್
Published On :

ತಿರುವನಂತಪುರಮ್: ಕೇರಳದಲ್ಲಿ ಬಿಜೆಪಿ ಪಕ್ಷ ತನ್ನ ಖಾತೆಯನ್ನು ತೆರೆಯಲು ಕಾರಣರಾಗಿರುವ ಬಿಜೆಪಿ ನಾಯಕ ರಾಜಗೋಪಾಲ್ ತಮ್ಮ ಗೆಲುವಿನ ಬಗ್ಗೆ ಮಾಧ್ಯಮಗಳಿಗೆ ಪ್ರರಿಕ್ರಿಯೆ ನೀಡಿದ್ದು, ತಮ್ಮ ಗೆಲುವು ಕೇರಳದಲ್ಲಿ ಬಿಜೆಪಿ ಉದಯವಾಗುತ್ತಿರುವ ಸಂಕೇತ ಎಂದು ಹೇಳಿದ್ದಾರೆ.
ಕಾಂಗ್ರೆಸ್, ಸಿಪಿಐ(ಎಂ) ಸೇರಿದಂತೆ ಎಲ್ಲರೂ ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವುದಿಲ್ಲ, ಬಿಜೆಪಿ ವಿಧಾನಸಭೆಯನ್ನು ಪ್ರವೇಶಿಸಬೇಕೆಂದರೆ ಅತಿಥಿಗಳ ಪಾಸ್ ಪಡೆದು ಸಂದರ್ಶಕರ ಗ್ಯಾಲರಿಯಲ್ಲಿ ಕುಳಿತುಕೊಳ್ಳಬೇಕು ಎಂದು ಟೀಕಿಸಿದ್ದರು, ಆದರೆ ಈಗ ಬಿಜೆಪಿ ಒಂದು ಸ್ಥಾನ ಗೆಲ್ಲುವ ಮೂಲಕ ಕೇರಳ ವಿಧಾನಸಭೆಗೆ ಪ್ರವೇಶಿಸುತ್ತಿದೆ ಎಂದು ಒ.ರಾಜಗೋಪಾಲ್ ತಿಳಿಸಿದ್ದಾರೆ.
ಬಿಜೆಪಿ ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ರಾಜಶೇಖರನ್," ಬಿಜೆಪಿ ಕಾರ್ಯಕರ್ತರ ಶ್ರಮ ಹಾಗೂ ಬಲಿದಾನಗಳಿಂದ ಬಿಜೆಪಿ ಕೇರಳ ವಿಧಾನಸಭೆಯನ್ನು ಪ್ರವೇಶಿಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.