ಮುಂಬೈನ ಸಿದ್ದಿ ವಿನಾಯಕ ದೇವಾಲಯಕ್ಕೆ ಆ್ಯಪಲ್ ಕಂಪನಿ ಸಿಇಒ ಟಿಮ್ ಕುಕ್ ಭೇಟಿ
ಆ್ಯಪಲ್ ಕಂಪನಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಟಿಮ್ ಕುಕ್ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದರು....

ಮುಂಬೈ : ಆ್ಯಪಲ್ ಕಂಪನಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಟಿಮ್ ಕುಕ್ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದರು.
ಐದು ದಿನಗಳ ಭಾರತ ಭೇಟಿಗೆ ಮಂಗಳವಾರ ಮಧ್ಯರಾತ್ರಿ ಬೀಜಿಂಗ್‌ನಿಂದ ಮುಂಬೈಗೆ ಬಂದಿಳಿದಿದ್ದರು. ‘ನಿಗದಿತ ವೇಳಾಪಟ್ಟಿಯಂತೆ ಕುಕ್ ಅವರು ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ಇರಲಿಲ್ಲ.
‘ರಿಲಯನ್ಸ್ ಉದ್ಯಮ ಸಮೂಹದ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಅವರೂ ಇದೇ ವೇಳೆ ದೇವಾಲಯಕ್ಕೆ ಬಂದಿದ್ದರು. ಇಬ್ಬರೂ ಕೆಲಹೊತ್ತು ಮಾತುಕತೆ
ನಡೆಸಿದರು.
ಟಿಮ್ ಕುಕ್ ಅವರು ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖರು ಮತ್ತು ಉದ್ಯಮಿಗಳನ್ನು ಭೇಟಿಯಾದರು. ಟಾಟಾ ಸಮೂಹದ ಮುಖ್ಯಸ್ಥ ಸೈರಸ್ ಮಿಸ್ತ್ರಿ, ಟಿಸಿಎಸ್ ವ್ಯವಸ್ಥಾಪಕ ನಿರ್ದೇಶಕ ಎನ್. ಚಂದ್ರಶೇಖರನ್, ವೊಡಾಫೋನ್ ಸಿಇಒ ಸುನಿಲ್ ಸೂದ್ ಅವರನ್ನು ತಾವು ತಂಗಿರುವ ತಾಜ್ ಹೋಟೆಲ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


