ಮಹಾರಾಷ್ಟ್ರದಲ್ಲಿ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು
ಮಹಾರಾಷ್ಟ್ರದಲ್ಲಿ ಗುರುವಾರ ರಾತ್ರಿ 2 ಲಘು ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪರಕದಲ್ಲಿ 3.5ರಷ್ಟು ತೀವ್ರ ದಾಖಲಾಗಿದೆ ಎಂದು ತಿಳಿದುಬಂದಿದೆ...

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ ರಾತ್ರಿ 2 ಲಘು ಭೂಕಂಪನಗಳು ಸಂಭವಿಸಿದ್ದು, ರಿಕ್ಟರ್ ಮಾಪರಕದಲ್ಲಿ 3.5ರಷ್ಟು ತೀವ್ರ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಕೊಯ್ನಾ ಪ್ರಾಂತ್ಯದಲ್ಲಿ ಈ ಎರಡು ಭೂಕಂಪನಗಳು ಸಂಭವಿಸಿದ್ದು, ಗುರುವಾರ ರಾತ್ರಿ 11.37 ರ ಸುಮಾರಿಗೆ ಭೂಗರ್ಭದ 15 ಕಿ.ಮೀ. ತಳಭಾಗದಲ್ಲಿ ಕಂಪನ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.5 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪಗಳ ಪ್ರಾಂತ್ಯವೆಂದೇ ಗುರುತಿಸಲ್ಪಟ್ಟಿರುವ ಕೊಯ್ನಾ ಪ್ರದೇಶದಲ್ಲಿ ಗುರುವಾರ ರಾತ್ರಿ ದಾಖಲಾಗಿರುವುದು ಲಘು ಕಂಪನವಾದ್ದರಿಂದ ಯಾವುದೇ ಜೀವ ಹಾನಿ, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


