ಕೇರಳ ಮುಖ್ಯಮಂತ್ರಿ ಸ್ಥಾನಕ್ಕೆ ಪಿಣರಾಯಿ ವಿಜಯನ್ ಸಾಧ್ಯತೆ
ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲು ಸಿಪಿಐ (ಎಂ) ರಾಜ್ಯ ಸಮಿತಿ ಶುಕ್ರವಾರ ಬೆಳಗ್ಗೆ ಸಭೆ ಸೇರಿದೆ...

Published On :
ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲು ಸಿಪಿಐ (ಎಂ) ರಾಜ್ಯ ಸಮಿತಿ ಶುಕ್ರವಾರ ಬೆಳಗ್ಗೆ ಸಭೆ ಸೇರಿದೆ.
ಆ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪಾಲಿಟ್ ಬ್ಯೂರೋ ಸದಸ್ಯ ಪ್ರಕಾಶ್ ಕಾರಾಟ್ ಉಪಸ್ಥಿತರಾಗಲಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪಾಲಿಟ್ ಬ್ಯೂರೋ ಸದಸ್ಯ ಪಿಣರಾಯಿ ವಿಜಯನ್ ಅವರನ್ನೇ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದ್ದು, ವಿಎಸ್ ಅಚ್ಯುತಾನಂದನ್ ಅವರಿಗೆ ಸಚಿವ ಸಂಪುಟದಲ್ಲಿ ಪ್ರಧಾನ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.
ಅದೇ ವೇಳೆ ಕೇರಳದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಎರಡು ದಿವಸಗಳಲ್ಲಿ ಗೊತ್ತಾಗಲಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚುನಾವಣೆKeralaಮುಖ್ಯಮಂತ್ರಿElectionಕೇರಳVS Achuthanandanವಿಎಸ್ ಅಚ್ಯುತಾನಂದನ್Pinarayi Vijayanಪಿಣರಾಯಿ ವಿಜಯನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


