ಎರಡು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ: ಸೀತಾರಮ್ ಯೆಚೂರಿ
ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ನವದೆಹಲಿ: ಎರಡು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.
ದೇಶದಲ್ಲಿ ಕೇವಲ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆಯಾಗುತ್ತಿರುವುದು ಮಾತ್ರವಲ್ಲದೇ, ಜನರ ಮೇಲೆ ಆರ್ಥಿಕ ಹೊರೆಯನ್ನು ಹೊರಿಸಲಾಗಿದೆ ಎಂದು ಸಿಪಿಐಎಂ ನ ಪೀಪಲ್ಸ್ ಡೆಮಾಕ್ರೆಸಿ ಎಂಬ ಪತ್ರಿಕೆಯಲ್ಲಿ ಬರೆದಿರುವ ಲೇಖನದಲ್ಲಿ ಸೀತಾರಾಮ್ ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂರನೇ ವರ್ಷದ ಆಡಳಿತಕ್ಕೆ ನರೇಂದ್ರ ಮೋದಿ ಸರ್ಕಾರ ಕಾಲಿಡುತ್ತಿದ್ದು, ದೇಶದ ಜಾತ್ಯಾತೀತ ಮೌಲ್ಯಗಳಿಗೆ ಧಕ್ಕೆ ಉಂಟು ಮಾಡುವ ಪ್ರಯತ್ನಕ್ಕೆ ಪ್ರತಿರೋಧ ತೋರಬೇಕಿದೆ ಎಂದು ಸೀತಾರಾಮ್ ಯೆಚೂರಿ ಕರೆ ನೀಡಿದ್ದಾರೆ. "2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಕೋಮು ದೃವೀಕರಣ ನಡೆಯುತ್ತಿದೆ ಎಂದು ಯೆಚೂರಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


