ಕುಪ್ವಾರ ಎನ್ ಕೌಂಟರ್: 5 ಉಗ್ರರ ಹತ್ಯೆ, 3 ಯೋಧರಿಗೆ ಗಾಯ
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಎನ್ ಕೌಂಟರ್ ಗೆ ಐವರು ಉಗ್ರರು ಬಲಿಯಾಗಿದ್ದು, ಎನ್ ಕೌಂಟರ್ ವೇಳೆ ಮೂವರು...

Published On :
ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶನಿವಾರ ನಡೆಸಿದ ಎನ್ ಕೌಂಟರ್ ಗೆ ಐವರು ಉಗ್ರರು ಬಲಿಯಾಗಿದ್ದು, ಎನ್ ಕೌಂಟರ್ ವೇಳೆ ಮೂವರು ಯೋಧರು ಸಹ ಗಾಯಗೊಂಡಿದ್ದಾರೆ.
ಶ್ರೀನಗರದಿಂದ 81 ಕಿಮೀ ದೂರದ ಕುಪ್ವಾರ ಜಿಲ್ಲೆಯ ಡ್ರಗ್ಮುಲ್ಲಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ, ಐವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಗ್ರರು ಸಹ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದರಿಂದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ, ಅವರ ಬಳಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


