ದೇಶ

ಎಐಎಡಿಎಂಕೆ ಶಾಸಕ ಸತ್ತನೆಂದು ಸಾಮಾಜಿಕ ಮಾಧ್ಯಮದಲ್ಲಿ ಘೋಷಣೆ

ಎಐಎಡಿಎಂಕೆಯ ಗೆದ್ದ ಅಭ್ಯರ್ಥಿಯನ್ನು ಸತ್ತನೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಘೋಷಣೆ ಮಾಡಿರುವ ಘಟನೆ ನಡೆದಿದೆ.

ಎಐಎಡಿಎಂಕೆ ಶಾಸಕ ಸತ್ತನೆಂದು ಸಾಮಾಜಿಕ ಮಾಧ್ಯಮದಲ್ಲಿ ಘೋಷಣೆ
ಎಸ್.ಎಂ ಸೀನಿವೇಲ್
Published On :

ಮಧುರೈ: ಗೆದ್ದ ಅಭ್ಯರ್ಥಿಯನ್ನು ಸತ್ತನೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಘೋಷಣೆ ಮಾಡಿರುವ ಘಟನೆ ನಡೆದಿದೆ.

ಪಾರ್ಶ್ವವಾಯು ಪೀಡಿತರಾಗಿ ಖಾಸಗಿ ಆಸ್ಪತ್ರೆ ಸೇರಿದ ಎಐಎಡಿಎಂಕೆ ಅಭ್ಯರ್ಥಿ ಎಸ್.ಎಂ ಸೀನಿವೇಲ್ ನಿಧನರಾದರೆಂದು ತಮಿಳುನಾಡಿನ ಕೆಲ ಟಿವಿ ಚಾನೆಲ್ ಗಳು ಸುದ್ದಿ ಪ್ರಸಾರ ಮಾಡಿದ್ದವು. ಆದರೆ, ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿದ ನಂತರ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಮತ ಎಣಿಕೆ ಮುಗಿದ ನಂತರ ತಾವು ಜಯ ಗಳಿಸಿರುವ ವಿಷಯ ತಿಳಿಸಿದ ಕೂಡಲೇ ಅವರ ರಕ್ತದೊತ್ತಡ ಅಧಿಕವಾಗಿ, ನಂತರ ಅವರಿಗೆ ಪಾರ್ಶ್ವವಾಯು ಬಡಿಯಿತು ಎಂದು ಸೀನಿವೇಲ್ ಪುತ್ರ ಎಸ್ ಸೆಲ್ಪ ಕುಮಾರ್ ತಿಳಿಸಿದ್ದಾರೆ.

ಇನ್ನೂ ಅವರಿಗೆ ಸಂಪೂರ್ಣ ವಿಶ್ರಾಂತಿ ಅವಶ್ಯಕತೆಯಿದೆ ಎಂದು ವೈದ್ಯರು ಸೂಚಿಸಿದ್ದು, ಪಕ್ಷದ ಯಾವುದೇ ಕಾರ್ಯಕರ್ತರಿಗೂ ಅವರನ್ನು ನೋಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.