ಅರುಣಾಚಲ ಪ್ರದೇಶದಲ್ಲಿ ಕಣಿವೆಗೆ ವಾಹನ ಉರುಳಿ 17 ಜನರ ಸಾವು
ಅರುಣಾಚಲ ಪ್ರದೇಶದಲ್ಲಿ ಪ್ರಯಾಣಿಕ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ 17 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ...

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಪ್ರಯಾಣಿಕ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ 17 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ರೂಪ ಕಲಕ್ತಾಂಗ್ ರಸ್ತೆಯಲ್ಲಿ ತೆರಳುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಕೆಸರಿನಿಂದ ಕೂಡಿದ್ದ ರಸ್ತೆಯಿಂದ ವಾಹನ ಕೆಳಗೆ ಜಾರಿ ಪ್ರಪಾತಕ್ಕೆ ಬಿದ್ದಿದೆ. ಘಟನೆಯಸ್ಸಿ 17 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅರುಣಾಲಪ್ರದೇಶದ ಇಂಧನ ಸಚಿವ ಟಿ.ಎನ್.ತಂಗಧೋಕ್ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ವೀಕ್ಷಿಸುತ್ತಿದ್ದಾರೆ.
ಅಲ್ಲದೆ ಖುದ್ದು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದು, ಸರ್ಕಾರದಿಂದ ಅಗತ್ಯ ನೆರವು ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


