ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸೋನೊವಾಲ್ ಆಯ್ಕೆ
ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಅಸ್ಸಾಂನ...

Published On :
ಗುವಾಹಟಿ: ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಅಸ್ಸಾಂನ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೇ 24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋನೊವಾಲ್ ಅವರನ್ನು ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. ಇದರೊಂದಿಗೆ ಅಸ್ಸಾಮಿನ ನೂತನ ಮುಖ್ಯಮಂತ್ರಿಯನ್ನು ಔಪಚಾರಿಕವಾಗಿ ಆಯ್ಕೆ ಮಾಡಿದಂತಾಗಿದೆ.
ಸೋನೋವಾಲ್ ಅವರು ಮೇ 24ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದ ಬಳಿಕ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದ ಸೋನೋವಾಲ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರ ಜೊತೆಗೆ ಸರ್ಕಾರ ರಚನೆ ಸಂಬಂಧವಾಗಿ ಮಾತುಕತೆ ನಡೆಸಿ ರಾಜ್ಯಕ್ಕೆ ವಾಪಸಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Assamಅಸ್ಸಾಂSarbananda Sonowalಸರ್ಬಾನಂದ್ ಸೋನೊವಾಲ್BJP legislature party leaderಬಿಜೆಪಿ ಶಾಸಕಾಂಗ ಪಕ್ಷದ ನಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


