ಇರಾನ್ ಪ್ರವಾಸದಲ್ಲಿ ಪ್ರಧಾನಿ ಮೋದಿ: 12 ಒಪ್ಪಂದಗಳಿಗೆ ಸಹಿ
ಇರಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇರಾನ್ ಅಧ್ಯಕ್ಷ ಹಸನ್ ರೂಹಾನಿ ಅವರೊಂದಿಗೆ ಮಾತುಕತೆ ನಡೆಸಿದ್ದು 12 ಒಪ್ಪಂದಗಳಿಗೆ ಸಹಿಹಾಕಿದ್ದಾರೆ.

ತೆಹ್ರಾನ್: ಇರಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇರಾನ್ ಅಧ್ಯಕ್ಷ ಹಸನ್ ರೂಹಾನಿ ಅವರೊಂದಿಗೆ ಮಾತುಕತೆ ನಡೆಸಿದ್ದು 12 ಒಪ್ಪಂದಗಳಿಗೆ ಸಹಿಹಾಕಿದ್ದಾರೆ.
ಒಪ್ಪಂದಗಳಿಗೆ ಸಹಿಹಾಕಿದ ನಂತರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ- ಇರಾನ್ ಮಿತ್ರ ರಾಷ್ಟ್ರಗಳಾಗಿದ್ದು, ದೀರ್ಘಕಾಲದ ಸಾಂಸ್ಕೃತಿಕ, ವಾಣಿಜ್ಯ, ಕಲೆ ಸಂಬಂಧಗಳನ್ನು ಹೊಂದಿದೆ. ಚಾಬಹಾರ್ ಬಂದರು ನಿರ್ಮಾಣ ಒಪ್ಪಂದ ಸೇರಿದಂತೆ ಒಟ್ಟು 12 ಮಹತ್ವದ ಒಪ್ಪಂದಗಳು ನಡೆದಿದ್ದು, ಇವು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭ ಮಾಡಲಿವೆ, ಚಬಹಾರ್ ಬಂದರು ನಿರ್ಮಾಣಕ್ಕಾಗಿ 500 ಡಾಲರ್ ನಷ್ಟು ಹಣವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಒಪ್ಪಂದಗಳ ಬಗ್ಗೆ ಮಾತನಾಡಿರುವ ಇರಾನ್ ಅಧ್ಯಕ್ಷ ಹಸನ್ ರೂಹಾನಿ, ಭಾರತದೊಂದಿಗಿನ ಒಪ್ಪಂದಗಳಿಂದ ಉಭಯ ದೇಶಗಳ ಆರ್ಥಿಕ ಸಂಬಂಧ ಗಟ್ಟಿಗೊಳ್ಳಲಿದೆ ಎಂದು ಹೇಳಿದ್ದಾರೆ.
ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಪರಸ್ಪರ ಸಹಕಾರ, ಸಾಂಸ್ಕೃತಿಕ ವಿನಿಮಯ ಸಹಕಾರವನ್ನು ಉತ್ತೇಜಿಸುವುದು, ಬಂದರು ಅಭಿವೃದ್ಧಿ, ಚಬಹಾರ್ ಬಂದರು ನಿರ್ಮಾಣ ಒಪ್ಪಂದ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ಮೋದಿ ಇರಾನ್ ಗೆ 150 ಮಿಲೀಯನ್ ಡಾಲರ್ ಸಾಲ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


