ದೇಶ

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ

ಉದ್ಯಮಿಗಳನ್ನು ನಾಮ ನಿರ್ದೇಶನ ಮಾಡುವ ತನ್ನ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿ ಸುಧಾಮೂರ್ತಿ ಅವರಿಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪಕ್ಕೆ ಆರಂಭದಲ್ಲೇ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪ್ರಸ್ತಾಪವನ್ನು ಸುಧಾಮೂರ್ತಿ ಅವರು ತಿರಸ್ಕರಿಸಿದ್ದಾರೆ.

ರಾಜ್ಯಸಭೆಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪ ತಿರಸ್ಕರಿಸಿದ ಸುಧಾಮೂರ್ತಿ
ಸುಧಾಮೂರ್ತಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಗೆ ಉದ್ಯಮಿಗಳನ್ನು ನಾಮ ನಿರ್ದೇಶನ ಮಾಡುವ ತನ್ನ ಹಳೆಯ ಸಂಪ್ರದಾಯಕ್ಕೆ ತಿಲಾಂಜಲಿ ಹಾಡಿ ಸುಧಾಮೂರ್ತಿ ಅವರಿಗೆ ಟಿಕೆಟ್ ನೀಡುವ ಜೆಡಿಎಸ್ ಪ್ರಸ್ತಾಪಕ್ಕೆ ಆರಂಭದಲ್ಲೇ ಹಿನ್ನಡೆಯುಂಟಾಗಿದ್ದು, ಜೆಡಿಎಸ್ ಪ್ರಸ್ತಾಪವನ್ನು ಸುಧಾಮೂರ್ತಿ ಅವರು ತಿರಸ್ಕರಿಸಿದ್ದಾರೆ.

ಈ ಹಿಂದೆ ಕೇವಲ ಉಧ್ಯಮಿಗಳನ್ನು ಮಾತ್ರ ಆಯ್ಕೆ ಮಾಡಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುತ್ತಿದ್ದ ಜೆಡಿಎಸ್ ಹಲವು ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಸಂಪನ್ಮೂಲ ವ್ಯಕ್ತಿಗಳ  ಮೊರೆ ಹೋಗಿದ್ದು, ಇದೇ ಕಾರಣಕ್ಕಾಗಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತು ನಿರ್ಧಾರ ಕೈಗೊಂಡಿತ್ತು. ಆ ಮೂಲಕ ಜೆಡಿಎಸ್ ವತಿಯಿಂದ ಸ್ಥಳೀಯ ಮತ್ತು ಪ್ರಬಲ  ಅಭ್ಯರ್ಥಿಯನ್ನು ಬೆಂಬಲಿಸುವುದು ಅದರ ಉದ್ದೇಶವಾಗಿತ್ತು. ಆದರೆ ಜೆಡಿಎಸ್ ಲೆಕ್ಕಾಚಾರವನೆಲ್ಲಾ ಸುಧಾಮೂರ್ತಿ ತಲೆಕೆಳಗೆ ಮಾಡಿದ್ದು, ಸ್ವತಃ ತಾವೇ ರಾಜ್ಯಸಭೆ ಚುನಾವಣೆಯಲ್ಲಿ  ಸ್ಪರ್ಧಿಸುವುದಿಲ್ಲ ಎಂದು ಹೇಳಿ ಜೆಡಿಎಸ್ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಪಿ ಚಿದಂಬರಂ ಅವರನ್ನು ಬೆಂಬಲಿಸುವ ಕುರಿತು ಜೆಡಿಎಸ್ ನಲ್ಲೇ ಗೊಂದಲಗಳು ಎದುರಾಗಿದ್ದು, ಇದೇ ಕಾರಣಕ್ಕಾಗಿ ಜೆಡಿಎಸ್  ಪಿ.ಚಿದಂಬರಂ ಅವರನ್ನು  ಬೆಂಬಲಿಸುವ ಬದಲು ಸ್ಥಳೀಯ ಪ್ರಬಲ ಅಭ್ಯರ್ಥಿಯಾಗಿ ಸುಧಾಮೂರ್ತಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿತ್ತು. ಆದರೆ ಇದೀಗ ಸುಧಾಮೂರ್ತಿ ಅವರು ಕಣದಿಂದೆ ಸರಿದಿದ್ದು, ಈಗ ಜೆಡಿಎಸ್  ತನ್ನ ನೂತನ ಅಭ್ಯರ್ಥಿಗಾಗಿ ಮತ್ತೆ ಶೋಧ ಆರಂಭಿಸಿದೆ.

ಕರ್ನಾಟಕದ ಒಟ್ಟು 4 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 11ರಂದು ಮತದಾನ ನಡೆಯಲಿದೆ. ಪ್ರತಿಯೊಬ್ಬ ಅಭ್ಯರ್ಥಿ ಕೂಡ 45 ಪ್ರಥಮ ಆಧ್ಯತೆಯ ಮತ ಪಡೆಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.