ಮ್ಯಾನ್ಮಾರ್ ಭೂಕುಸಿತ: 11 ಸಾವು, ಹಲವರು ನಾಪತ್ತೆ
ಮ್ಯಾನ್ಮಾರ್ ಉತ್ತರ ಭಾಗದಲ್ಲಿರುವ ಗಣಿ ಪ್ರದೇಶದಲ್ಲಿ ಕಳೆದ ರಾತ್ರಿ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವುದಾಗಿ...

ಯಾಂಗಾನ್: ಮ್ಯಾನ್ಮಾರ್ ಉತ್ತರ ಭಾಗದಲ್ಲಿರುವ ಗಣಿ ಪ್ರದೇಶದಲ್ಲಿ ಕಳೆದ ರಾತ್ರಿ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವುದಾಗಿ ಮಂಗಳವಾರ ತಿಳಿದುಬಂದಿದೆ.
ಕಚಿನ್ ಪ್ರಾಂತ್ಯದ ಹಾಕಂತ್ ಎಂಬಲ್ಲಿ ಘಟನೆ ನಡೆದಿದ್ದು, ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ ಪರಿಣಾಮ ಹಲವು ಮಣ್ಣೆನ ಕೆಳಗೆ ಸಿಲುಕಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಭೂಕುಸಿತ ಸಂಭವಿಸುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈ ವರೆಗೂ 11 ಮೃತ ದೇಹಳನ್ನು ಹೊರ ತೆಗೆದಿದ್ದಾರೆನ್ನಲಾಗಿದೆ.
ಮತ್ತಷ್ಟು ಜನರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ 11 ಮೃತ ದೇಹಗಳನ್ನು ಮಣ್ಣಿನಿಂದ ಹೊರ ತೆಗೆಯಲಾಗಿದೆ. ಇನ್ನು 50 ಮಂದಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿ ನಿಲಾರ್ ಮೈಯಿಂಟ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


