ದೇಶ

ಉತ್ತರಪ್ರದೇಶದಕ್ಕೆ ಅಸ್ಸಾಂ ಮಾದರಿಯ ಕಾರ್ಯತಂತ್ರ ಪ್ರಯೋಗಿಸಲಿದೆಯೇ ಬಿಜೆಪಿ?

ಅಸ್ಸಾಂ ನಲ್ಲಿ ಐತಿಹಾಸಿಕ ವಿಜಯ ಸಾಧಿಸಿರುವ ಬಿಜೆಪಿ ಈಗ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಅಸ್ಸಾಂ ಮಾದರಿಯ ಕಾರ್ಯತಂತ್ರವನ್ನೇ ಉತ್ತರ ಪ್ರದೇಶದಲ್ಲಿ ಪ್ರಯೋಗಿಸಲು ಚಿಂತನೆ ನಡೆಸುತ್ತಿದೆ.

ಉತ್ತರಪ್ರದೇಶದಕ್ಕೆ ಅಸ್ಸಾಂ ಮಾದರಿಯ ಕಾರ್ಯತಂತ್ರ ಪ್ರಯೋಗಿಸಲಿದೆಯೇ ಬಿಜೆಪಿ?
ಬಿಜೆಪಿ
Published On :

ನವದೆಹಲಿ: ಅಸ್ಸಾಂ ನಲ್ಲಿ ಐತಿಹಾಸಿಕ ವಿಜಯ ಸಾಧಿಸಿರುವ ಬಿಜೆಪಿ ಈಗ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಅಸ್ಸಾಂ ಮಾದರಿಯ ಕಾರ್ಯತಂತ್ರವನ್ನೇ ಉತ್ತರ ಪ್ರದೇಶದಲ್ಲಿ ಪ್ರಯೋಗಿಸಲು ಚಿಂತನೆ ನಡೆಸುತ್ತಿದೆ. 
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ತನ್ನ ಮುಂದಿನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸಲು ಅಲಹಾಬಾದ್ ನ್ನು ಆಯ್ಕೆ ಮಾಡಿಕೊಂಡಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅಲಹಾಬಾದ್ ಈಗ ಸಮಾಜವಾದಿ ಪಕ್ಷದ ತೆಕ್ಕೆಯಲ್ಲಿದೆ.
ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರುಗಳು ಭಾಗವಹಿಸಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಬಿಜೆಪಿ ಅಲಹಾಬಾದ್ ನ್ನೇ ಆಯ್ಕೆ ಮಾಡಿಕೊಂಡಿರುವುದು ಚುನಾವಣಾ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಅಸ್ಸಾಂ ಮಾದರಿಯಲ್ಲೇ ವಿರೋಧಪಕ್ಷಗಳ ನಾಯಕರನ್ನು ಸೆಳೆಯುವ ಕಾರ್ಯತಂತ್ರವನ್ನು ಈಗಾಗಲೇ ಬಿಜೆಪಿ ಪ್ರಾರಂಭಿಸಿದ್ದು, ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ಹಾಗೂ ಮುಲಾಯಂ ಸಿಂಗ್ ಯಾದವ್ ಸಂಪುಟದ ಮಾಜಿ ಸಚಿವ ಜಗದೀಶ್ ರಾಣ ಬಿಜೆಪಿ ಸೇರಿದ್ದಾರೆ. ಇದರೊಂದಿಗೆ ಇನ್ನೂ ಹಲವು ವಿಪಕ್ಷ ನಾಯಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಸ್ಸಾಂ ಮಾದರಿಯ ಕಾರ್ಯತಂತ್ರವನ್ನೇ ರೂಪಿಸುತ್ತದೆ ಎಂದು ಹೇಳಲಾಗುತ್ತಿದ್ದು, ಅಸ್ಸಾಂ ಚುನಾವಣೆಯಲ್ಲಿ ಬಿಜೆಪಿ ಪರ ರಣತಂತ್ರ ರೂಪಿಸಿದ್ದ ರಜತ್ ಸೇಥಿ ಅವರನ್ನು ಕರೆತರುವ ಸಾಧ್ಯತೆ ಇದೆ. 2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಪರ ಮತ್ತು ಬಿಹಾರದಲ್ಲಿ ನಿತೀಶ್ ಕುಮಾರ್ ಪರ ಚುನಾವಣಾ ತಂತ್ರ ರೂಪಿಸಿದ್ದ ಪ್ರಶಾಂತ್ ಕಿಶೋರ್ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪರ ಚುನಾವಣಾ ತಂತ್ರ ರೂಪಿಸುತ್ತಿದ್ದು, ಉತ್ತರ ಪ್ರದೇಶ ಚುನಾವಣಾ ಮತ್ತಷ್ಟು ರಂಗೇರಲಿದೆ. ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜೂ.4 ರಿಂದ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.