ದೇಶ

ಇಂದಿನಿಂದ ರಾಷ್ಟ್ರಪತಿಗಳ ಚೀನಾ ಪ್ರವಾಸ: ಶೈಕ್ಷಣಿಕ, ಸಂಶೋಧನೆ ಕುರಿತ ಒಪ್ಪಂದಗಳಿಗೆ ಸಹಿ ನಿರೀಕ್ಷೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದಿನಿಂದ (ಮೇ.24 ರಿಂದ) ನಾಲ್ಕು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದಾರೆ.

ಇಂದಿನಿಂದ ರಾಷ್ಟ್ರಪತಿಗಳ ಚೀನಾ ಪ್ರವಾಸ: ಶೈಕ್ಷಣಿಕ, ಸಂಶೋಧನೆ ಕುರಿತ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಪ್ರಣಬ್ ಮುಖರ್ಜಿ
Published On :

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದಿನಿಂದ (ಮೇ.24 ರಿಂದ) ನಾಲ್ಕು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಚೀನಾಗೆ ಭೇಟಿ ನೀಡುತ್ತಿದ್ದಂತೆಯೇ ಅಲ್ಲಿರುವ ಪ್ರಮುಖ ಕೈಗಾರಿಕಾ ಪ್ರಾಂತ್ಯ ಗುವಾಂಗ್ಝೌ ಗೆ ಪ್ರಣಬ್ ಮುಖರ್ಜಿ ಮೊದಲ  ಭೇಟಿ ನೀಡಲಿದ್ದಾರೆ. 
ಗುವಾಂಗ್ಝೌ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ, ಚೀನಾದಲ್ಲಿರುವ ಭಾರತೀಯ ಸಮುದಾಯದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದು ಮೊದಲ ದಿನದ ಕಾರ್ಯಕ್ರಮದ ವೇಳಾಪಟ್ಟಿಯಾದರೆ, ಎರಡನೇ ದಿನ ಚೀನಾದ ರಾಜಧಾನಿ ಬೀಜಿಂಗ್ ಗೆ ತೆರಳಲಿರುವ ರಾಷ್ಟ್ರಪತಿಗಳು, ಚೀನಾ ಅಧ್ಯಕ್ಷ ಕ್ಸಿ ಝಿನ್ ಪಿಂಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದು ಭಾರತ- ಚೀನಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರೊಂದಿಗೆ ಕೇಂದ್ರ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಐಐಟಿಗಳ ನಿರ್ದೇಶಕರು ಚೀನಾಗೆ ತೆರಳಿದ್ದು ಚೀನಾದ ಸಂಶೋಧನೆ ಹಾಗೂ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಒಪ್ಪಂದಗಳಿಗೆ ಸಹಿಹಾಕಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.