ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳು ನೀಟ್ ಗೆ ಒಳಪಡುತ್ತವೆ: ಜೆಪಿ ನಡ್ಡಾ
ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಅಡಿಯಲ್ಲಿ ಖಾಸಗಿ ವೈದ್ಯಕೀಯ...

Published On :
ನವದೆಹಲಿ: ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳು ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಅಡಿಯಲ್ಲಿ ಬರಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಹೇಳಿದ್ದಾರೆ.
ನೀಟ್ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಮಾಡಿದ ನಂತರ ಮಾತನಾಡಿದ ಜೆ ಪಿ ನಡ್ಡಾ, ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಲು ಕಾನೂನು ಬದ್ಧ ಬೆಂಬಲ ನೀಡಲಾಗಿದೆ ಎಂದು ಹೇಳಿದ್ದಾರೆ.
ನೀಟ್ ಅಡಿಯಲ್ಲಿ ಎಲ್ಲಾ ಖಾಸಗಿ ಸಂಸ್ಥೆಗಳು ಮತ್ತು ವೈದ್ಯಕೀಯ ಕಾಲೇಜುಗಳ ಬರಲಿದೆ. ರಾಜ್ಯ ಸರ್ಕಾರಗಳು ಯುಜಿ ಸೀಟ್ ಗಳಿಗಾಗಿ ತಾವೇ ಖುದ್ದಾಗಿ ಪರೀಕ್ಷೆ ನಡೆಸಬಹುದು ಅಥವಾ ನೀಟ್ ಅಡಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಬಹುದು. 2017-18ರ ಪಿಜಿ ಕೋರ್ಸ್ ಗಳಿಗೆ ಮಾತ್ರ 2016 ಡಿಸೆಂಬರ್ ನಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಐದು ರಾಜ್ಯ ಸರ್ಕಾರಗಳು ನಡೆಸಿದ ವಿವಿಧ ಪರೀಕ್ಷೆಗಳಿಗೆ 6.5 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಅಲ್ಲದೇ, 6.25 ಲಕ್ಷ ವಿದ್ಯಾರ್ಥಿಗಳು ನೀಟ್ 1(ಮೊದಲನೇ ಹಂತ) ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯಗಳು ಸರ್ಕಾರಿ ಕಾಲೇಜುಗಳ ಎಂಬಿಬಿಎಸ್ ಮತ್ತು ಬಿಡಿಎಸ್ ಸೀಟುಗಳ ಭರ್ತಿಗಾಗಿ ತಮ್ಮದೇ ಆದ ಪ್ರವೇಶ ಪರೀಕ್ಷೆಯನ್ನು ನಡೆಸಬಹುದಾಗಿದೆ. ಕೇಂದ್ರ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಬಯಸುವ ಅಭ್ಯರ್ಥಿಗಳು ಮಾತ್ರ ನೀಟ್ ಪರೀಕ್ಷೆ ಬರೆದರೆ ಸಾಕು ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


