ದೇಶ

ಮಹಿಳೆಯರನ್ನು ರೇಪ್ ಮಾಡಿ, ವಿಡಿಯೋ ಮಾಡಿಕೊಳ್ಳುತ್ತಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದಲ್ಲದೇ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಸ್ವಯಂ ಘೋಷಿತ ದೇವಮಾನವ...

ಮಹಿಳೆಯರನ್ನು ರೇಪ್ ಮಾಡಿ, ವಿಡಿಯೋ ಮಾಡಿಕೊಳ್ಳುತ್ತಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ
ಸಾಂದರ್ಭಿಕ ಚಿತ್ರ
Published On :
ಬರಬಂಕಿ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗುವುದಲ್ಲದೇ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಸ್ವಯಂ ಘೋಷಿತ ದೇವಮಾನವ ಈಗ ಪೊಲೀಸರ ಅತಿಥಿಯಾಗಿದ್ದಾನೆ. 
ಹರೈ ಹಳ್ಳಿಯಲ್ಲಿರುವ ಆಶ್ರಮದಲ್ಲಿ ಸ್ವಯಂ ಘೋಷಿತ ದೇವಮಾನವ ರಾಮ್ ಶಂಕರ್ ತಿವಾರಿ ಅಲಿಯಾಸ್ ಪರಮಾನಂದ ಬಂಧಿತ ಆರೋಪಿ. 
ಮಕ್ಕಳಿಲ್ಲದ ಅನೇಕ ಮಹಿಳೆಯರಿಗೆ ಮಕ್ಕಳು ಕರಣಿಸುವುದಾಗಿ ಹೇಳಿ ವಂಚಿಸಿ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದನು. ಅಷ್ಟೇ ಅಲ್ಲದೇ ಆ ದೃಶ್ಯವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದನು. ತಿವಾರಿ ಅನೇಕ ಮಹಿಳೆಯರನ್ನು ರೇಪ್ ಮಾಡಿದ್ದು, ಪ್ರತಿಯೊಂದನ್ನು ವಿಡಿಯೋ ಮಾಡಿದ್ದಾನೆ. 
ತೀವಾರಿ ಲೈಂಗಿಕ ದೌರ್ಜನ್ಯದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.