ದೇಶ

ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ನಿಧನ

15 ನೇ ತಮಿಳುನಾಡು ವಿಧಾನಸಭೆ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ಎಸ್.ಎಂ ಸೀನಿವೈಲ್ ಅಸು ನೀಗಿದ್ದಾರೆ....

ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ನಿಧನ
ಶಾಸಕ ಎಸ್.ಎಂ ಸೀನಿವೈಲ್
Published On :

ಮಧುರೈ: 15 ನೇ ತಮಿಳುನಾಡು ವಿಧಾನಸಭೆ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ಎಸ್.ಎಂ ಸೀನಿವೈಲ್ ಅಸು ನೀಗಿದ್ದಾರೆ.

65 ವರ್ಷದ ಸೀನಿವೈಲ್ ತಿರುಪ್ಪರಕುಂದರಮ್ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಪಾರ್ಶ್ವವಾಯುಗೆ ತುತ್ತಾಗಿದ್ದ ಸೀನಿವೈಲ್ ಮಧುರೈ ನ ವಡಮಲಯಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಕಳೆದ ಮೇ 18 ರಂದು ಪಾರ್ಶ್ವಪಾಯು ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೀನಿವೈಲ್ ಅವರನ್ನು ಸತ್ತು ಹೋದರೆಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.