ಅಯೋಧ್ಯೆ ಶಸ್ತ್ರಾಸ್ತ್ರ ತರಬೇತಿ: ಬಜರಂಗದಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಅಕ್ರಮ ಶಸ್ತ್ರಾಸ್ತ್ರಗಳ ತರಬೇತಿ ನೀಡುತ್ತಿರುವ ಬಜರಂಗದಳ ಸಂಘಟನೆಯ ಕಾರ್ಯಕರ್ತರ ವಿರುದ್ಧ ಅಯೋಧ್ಯೆಯ ಕೂತವಾಲಿ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ...

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರಗಳ ತರಬೇತಿ ನೀಡುತ್ತಿರುವ ಬಜರಂಗದಳ ಸಂಘಟನೆಯ ಕಾರ್ಯಕರ್ತರ ವಿರುದ್ಧ ಅಯೋಧ್ಯೆಯ ಕೂತವಾಲಿ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಅಯೋಧ್ಯೆಯಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಇತ್ತೀಚೆಗೆ ಶಸ್ತ್ರಾಸ್ತ್ರ ಬಳಕೆಗೆ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಸುಲ್ತಾನ್ ಪುರ, ಗೋರಖ್ ಪುರ, ಫಿಲಿಬಿಟ್, ನೊಯ್ಡಾ ಹಾಗೂ ಫತೇಪುರದಲ್ಲಿ ಜೂನ್ 5ರವರೆಗೆ ಇದೇ ರೀತಿಯ ಶಿಬಿರಗಳು ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಬಜರಂಗ ದಳದ ಕಾರ್ಯಕರ್ತರು ಬಂದೂಕು, ಕತ್ತಿ ಮತ್ತು ಲಾಠಿಗಳನ್ನು ಬೀಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ವೈರಲ್ ಆಗಿತ್ತು.
ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆಯೇ ಈ ರೀತಿಯಾಗಿ ಶಸ್ತ್ರಾಸ್ತ್ರ ಬಳಕೆ ಮಾಡಿ ತರಬೇತಿ ನೀಡುತ್ತಿರುವುದರ ವಿರುದ್ಧ ಕೆಲವು ಸಂಘಟನೆಗಳು ಹಾಗೂ ರಾಜರಕೀಯ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದೀಗ ಬಜರಂಗ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


