ಚುಡಾಯಿಸಿದ್ದನ್ನು ಪ್ರಶ್ನಿಸಲು ಹೋದ ಅಪ್ಪ-ಮಗಳ ಮೇಲೆ ಗುಂಡು ಹಾರಿಸಿದರು
ಮಗಳನ್ನು ಚುಡಾಯಿಸುತ್ತಿದ್ದನ್ನು ಕೇಳಲು ಹೋದ ತಂದೆ ಮತ್ತು ಮಗಳ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿರುವ...

Published On :
ಇಠಾ: ಮಗಳನ್ನು ಚುಡಾಯಿಸುತ್ತಿದ್ದನ್ನು ಕೇಳಲು ಹೋದ ತಂದೆ ಮತ್ತು ಮಗಳ ಮೇಲೆ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿರುವ ಘಟನೆ ನಿನ್ನೆ ನಡೆದಿದೆ.
ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ನಿಂತಿರಬೇಕಾದರೆ, ಅಲ್ಲಿಗೆ ಬಂದ ಇಬ್ಬರು ಯುವಕರು ಆಕೆಯನ್ನು ಚುಡಾಯಿಸಿದ್ದಾರೆ. ಇದನ್ನು ತಂದೆ ಪ್ರಶ್ನಿಸಲು ಹೋದಾಗ ತಂದೆಯ ಮೇಲೆ ಹಲ್ಲೆ ಮಾಡಿದಲ್ಲದೇ, ತಂದೆ- ಮಗಳ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ ಗುಂಡು ಇಬ್ಬರಿಗೂ ತಗಲದೆ ಅಪಾಯದಿಂದ ಪಾರಾಗಿದ್ದಾರೆ.
ಇಟಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಅಲಾಂ ಮತ್ತು ನಿಯಾಜ್ ಅಲಿ ಎಂದು ಗುರುತಿಸಲಾಗಿದೆ. ಆರೋಪಿಗಳು ತಲೆಮರಿಸಿಕೊಂಡಿದ್ದು, ತಂದೆ ಮಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಇಠಾ ಪೊಲೀಸ್ ಠಾಣೆ ಸರ್ಕಲ್ ಅಧಿಕಾರಿ ನಿಬೇಶ್ ಕಟಿಯಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


