ದೇಶ

ಸ್ಟ್ಯಾಂಪ್ ಪೇಪರ್ ಗೆ ಸಹಿ ಹಾಕಿ ಪಶ್ಚಿಮ ಬಂಗಾಳ ಶಾಸಕರಿಂದ ಸೋನಿಯಾ ನಿಷ್ಠೆ ಪ್ರದರ್ಶನ!

ಸಾಲು ಸಾಲು ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ, "ಸೋನಿಯಾ, ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಪಶ್ಚಿಮ ಬಂಗಾಳದ ಶಾಸಕರಿಂದ ಸ್ಟ್ಯಾಂಪ್ ಪೇಪರ್ ಮೇಲೆ ಬರೆಸಿಕೊಳ್ಳುತ್ತಿದೆ.

ಸ್ಟ್ಯಾಂಪ್ ಪೇಪರ್ ಗೆ ಸಹಿ ಹಾಕಿ ಪಶ್ಚಿಮ ಬಂಗಾಳ ಶಾಸಕರಿಂದ ಸೋನಿಯಾ ನಿಷ್ಠೆ ಪ್ರದರ್ಶನ!
ಸೋನಿಯಾ ಗಾಂಧಿ-ರಾಹುಲ್ ಗಾಂಧಿ
Published On :

ಕೋಲ್ಕತಾ: ಸಾಲು ಸಾಲು ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ,  "ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಪಶ್ಚಿಮ ಬಂಗಾಳದ ಶಾಸಕರಿಂದ ಸ್ಟ್ಯಾಂಪ್ ಪೇಪರ್ ಮೇಲೆ ಬರೆಸಿಕೊಳ್ಳುತ್ತಿದೆ.
ಅಭದ್ರ ಸ್ಥಿತಿಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ,  ಪಶ್ಚಿಮ ಬಂಗಾಳದಲ್ಲಿ ಇಂಥದ್ದೊಂದು ಅಭಿಯಾನ ಪ್ರಾರಂಭಿಸಿದ್ದು, ರಾಜ್ಯದಲ್ಲಿ ನೂತನವಾಗಿ ಆಯ್ಕೆಗೊಂಡ ಶಾಸಕರಿಂದ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವಿಧೇಯರಾಗಿರುತ್ತೇವೆ ಎಂದು ಸ್ಟ್ಯಾಂಪ್ ಪೇಪರ್ ಮೇಲೆ ಬರೆ
ಸುತ್ತಿದೆ. ಆಂಗ್ಲ ಮಾಧ್ಯಮವೊಂದು ಪ್ರಕಟಿಸಿರುವುದರ ವರದಿ ಪ್ರಕಾರ, ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ, ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುತ್ತೆವೆ ಎಂದು 100 ರೂಪಾಯಿ ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣ  ಮಾಡುವಂತೆ ಶಾಸಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಆದರೆ ಎರಡೂ ಪಕ್ಷಗಳಿಗೆ ಹೀನಾಯ ಸೋಲುಂಟಾಗಿದೆ. ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವುದರೊಂದಿಗೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದೂ ಕಾಂಗ್ರೆಸ್ ಶಾಸಕರು ಸ್ಟ್ಯಾಂಪ್ ಪೇಪರ್ ಮೇಲೆ ಪ್ರಮಾಣಮಾಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.