ದೇಶದ 2/3 ರಷ್ಟು ಜನ ಮೋದಿ ಸರ್ಕಾರದಿಂದ ತೃಪ್ತರಾಗಿದ್ದಾರೆ: ಸಮೀಕ್ಷೆ
ದೇಶದ ಎರಡನೇ ಮೂರರಷ್ಟು ಜನ ಎರಡು ವರ್ಷದ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೆಲಸಗಳಿಂದ ತೃಪ್ತರಾಗಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ..

ನವದೆಹಲಿ: ದೇಶದ ಎರಡನೇ ಮೂರರಷ್ಟು ಜನ ಎರಡು ವರ್ಷದ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೆಲಸಗಳಿಂದ ತೃಪ್ತರಾಗಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ಸುಮಾರು 20 ಸ್ಥಳಗಳಲ್ಲಿ 15 ಸಾವಿರ ಸ್ಥಳೀಯರಿಗೆ ಕೇಳಿದ ಪ್ರಶ್ನೆಗಳಿಂದ ಈ ಮಾಹಿತಿ ತಿಳಿದು ಬಂದಿದೆ. ತಾವು ನಿರೀಕ್ಷಿಸಿದಷ್ಟು ಸರ್ಕಾರ ಸಾಧನೆ ಮಾಡಿದೆ ಎಂದು ಶೇ.64 ರಷ್ಟು ಜನ ಹೇಳಿದರೇ. ಶೇ. 36 ರಷ್ಟು ಮಂದಿ ತಮ್ಮ ನಿರೀಕ್ಷೆಗೆ ತಕ್ಕ ಹಾಗೆ ಮೋದಿ ಸರ್ಕಾರ ಕೆಲಸ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಬೆಲೆ ಏರಿಕೆ ತಡೆಗಟ್ಟುವುದು ಸೇರಿದಂತೆ ಪ್ರಮುಖ ಕೆಲಸಗಳಲ್ಲಿ ಇನ್ನು ಹೆಚ್ಚಿನ ಪ್ರಯತ್ನ ಹಾಕಿ ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.
ಶೇ.76 ರಷ್ಟು ಜನ ಎನ್ ಡಿಎ ಸರ್ಕಾರದ ಸ್ವಚ್ಚ ಭಾರತ ಅಭಿಯಾನ ಮತ್ತು ಮೇಕ್ ಇನ್ ಇಂಡಿಯಾ ಯೋಜನೆಗಳನ್ನು ಒಪ್ಪಿಕೊಂಡಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಸರ್ಕಾರ ಹೆಚ್ಚೆಚ್ಚು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ , ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸಬೇಕೆಂಬುದು ಹಲವರ ಅಭಿಪ್ರಾಯವಾಗಿದೆ.
ಶೇ.61 ರಷ್ಟು ಜನ ಜಿಎಸ್ ಟಿ ಮಸೂದೆ ಮೇಲೆ ನಂಬಿಕೆ ಇಟ್ಟಿದ್ದಾರೆ. ಶೇ. 20 ರಷ್ಟು ಜನ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆಂದು ಸಮೀಕ್ಷೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


