16 ವರ್ಷದ ಬಾಲಕನನ್ನು ನಗ್ನಗೊಳಿಸಿ, ಮನಸೋ ಇಚ್ಛೆ ಥಳಿತ: ನಾಲ್ವರ ಬಂಧನ
ರಾಷ್ಚ್ರ ರಾಜಧಾನಿ ದೆಹಲಿ ಮತ್ತೊಂದು ಹೀನ ಕೃತ್ಯಕ್ಕೆ ಸಾಕ್ಷಿಯಾಗಿದ್ದು, 16 ವರ್ಷದ ಬಾಲಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ನಗ್ನಗೊಳಿಸಿ ಮನಸೋ ಇಚ್ಚೆ ಥಳಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.

ನವದೆಹಲಿ: ರಾಷ್ಚ್ರ ರಾಜಧಾನಿ ದೆಹಲಿ ಮತ್ತೊಂದು ಹೀನ ಕೃತ್ಯಕ್ಕೆ ಸಾಕ್ಷಿಯಾಗಿದ್ದು, 16 ವರ್ಷದ ಬಾಲಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ನಗ್ನಗೊಳಿಸಿ ಮನಸೋ ಇಚ್ಚೆ ಥಳಿಸಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ದೆಹಲಿಯ ಇಂದೇರ್ ಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಬಾಲಕನನ್ನು ಹಿಗ್ಗಾಮುಗ್ಗ ಥಳಿಸಿ ಆತನ ಮೇಲೆ ಅಸ್ವಾಭಾವಿಕ ಲೈಂಗಿಕ ವಿಕೃತಿ ನಡೆಸಲು ಮುಂದಾಗಿದ್ದರು ಎಂದು ತಿಳಿದುಬಂದಿದೆ. ಕಳೆದ ಸೋಮವಾರವೇ ಪ್ರಕರಣ ನಡೆದಿದ್ದು, ಇದೀಗ ತಡವಾಗಿ ಈ ವಿಚಾರ ಮಾಧ್ಯಮಗಳಲ್ಲಿ ಬೆಳಕಿಗೆ ಬಂದಿದೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ ತನಿಖೆಗೊಳಪಡಿಸಿದ್ದಾರೆ. ಪ್ರತ್ಯಕ್ಷ ದರ್ಶಿಗಳು ಹೇಳುವಂತೆ ಬಾಲಕನ್ನು ರಸ್ತೆಯಲ್ಲಿ ಬೆತ್ತಲಾಗಿ ಎಳೆದಾಡಿ ಆತನ ಗುಪ್ತಾಂಗದ ಮೇಲೆ ಮದ್ಯ ಚೆಲ್ಲಿ ಮೆಣಸಿನ ಪುಡಿ ಹಾಕಲಾಗಿದೆ. ಈ ಬಗ್ಗೆ ಬಾಲಕನ ಪೋಷಕು ಪೊಲೀಸರಲ್ಲಿ ದೂರಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಇದೀಗ ಪ್ರಕರಣ ಸಂಬಂಧ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


