ಜೆಎನ್ ಯು ವಿದ್ಯಾರ್ಥಿಗಳ ವಿರುದ್ಧದ ಶಿಸ್ತು ಕ್ರಮಕ್ಕೆ ಹೈಕೋರ್ಟ್ ತಡೆ
ಜೆಎನ್ ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿರುದ್ಧ ಜೆಎನ್ ಯು ಆಡಳಿತ...

Published On :
ನವದೆಹಲಿ: ಜೆಎನ್ ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿರುದ್ಧ ಜೆಎನ್ ಯು ಆಡಳಿತ ಮಂಡಳಿ ಕೈಗೊಂಡಿರುವ ಶಿಸ್ತು ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.
ಫೆಬ್ರವರಿ 9ರಂದು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ಸಂಬಂಧ ವಿಶ್ವವಿದ್ಯಾಲಯ ನೇಮಿಸಿದ್ದ ಆಂತರಿಕ ಸಮಿತಿ ನೀಡಿದ ವರದಿ ಅನ್ವಯ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿತ್ತು.
ತಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದ ವಿವಿಯ ತೀರ್ಮಾನವನ್ನು ಪ್ರಶ್ನಿಸಿ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡಸಿದ ಮನಮೋಹನ್ ಅವರು ಶಿಸ್ತು ಕ್ರಮಕ್ಕೆ ತಡೆ ನೀಡಿದ್ದು, ಮೇ 13ರಂದು ಕನ್ಹಯ್ಯಾಗೆ ನೀಡಿದ ಆದೇಶವನ್ನು ಇವರಿಗೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.
ಮೇ.13ರಂದು ಶಿಸ್ತು ಕ್ರಮದ ಕುರಿತು ಮೇಲ್ಮನವಿ ಪ್ರಾಧಿಕಾರವು ವಿಚಾರಣೆ ನಡೆಸುವವರೆಗೂ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚಿಸಿತ್ತು. ಅದೇ ಆದೇಶ ಖಾಲಿದ್ ಮತ್ತು ಅನಿರ್ಬನ್ ಅವರಿಗೂ ಅನ್ವಯಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


