ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸತತ 2ನೇ ಬಾರಿಗೆ ಮಮತಾ ಬ್ಯಾನರ್ಜಿ ಅವರು...

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸತತ 2ನೇ ಬಾರಿಗೆ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಹೂಗ್ಲಿ ನದಿಯ ತಟದಲ್ಲಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಮೇಲೆ ಮಮತಾ ಬ್ಯಾನರ್ಜಿ ಅವರು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪಶ್ಚಿಮ ಬಂಗಾಳ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರು ಮಮತಾಗೆ ಪ್ರತಿಜ್ಞಾವಿಧಿ ಬೋದಿಸಿದರು.
ಪ್ರಮಾಣ ವಚನ ಸಮಾರಂಭಕ್ಕಾಗಿ ದೊಡ್ಡ ಮಟ್ಟದಲ್ಲಿ ವೇದಿಕೆ ನಿರ್ಮಿಸಲಾಗಿದ್ದು, 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್, ಆರ್ಜಿಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


