ಸಾಧನೆ ಮಾಡದೆಯೇ ಸಂಭ್ರಮಿಸುತ್ತಿದೆ ಬಿಜೆಪಿ: ಕಾಂಗ್ರೆಸ್
ಆಡಳಿತಕ್ಕೆ ಸಂಬಂಧಿಸಿ ಯಾವುದೇ ಸಾಧನೆ ಮಾಡದಿದ್ದರೂ 2 ವರ್ಷದ ವರ್ಷಾಚರಣೆಯನ್ನು ಸಂಭ್ರಮಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ನವದೆಹಲಿ: ಆಡಳಿತಕ್ಕೆ ಸಂಬಂಧಿಸಿ ಯಾವುದೇ ಸಾಧನೆ ಮಾಡದಿದ್ದರೂ 2 ವರ್ಷದ ವರ್ಷಾಚರಣೆಯನ್ನು ಸಂಭ್ರಮಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.
ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೆಹಲಿಯ ಇಂಡಿಯಾ ಗೇಟ್ ಬಳಿ ಇಂದು ವಿಶೇಷ ಕಾರ್ಯಕ್ರಮ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಸಾಧನೆ ಮಾಡದೆಯೇ ಬಿಜೆಪಿ ಸಂಭ್ರಮವನ್ನಾಚರಿಸುತ್ತಿದೆ. ಬಿಜೆಪಿಯವರು ಏನನ್ನು ಮಾಡಿದ್ದಾರೆಂಬುದನ್ನು ತಿಳಿಯಲು ಜನರು ಇಚ್ಛಿಸುತ್ತಿದ್ದಾರೆ. ಆರ್ಥಿಕ ವಲಯದಲ್ಲಿ ಸಾಧನೆ ಮಾಡಿರುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಏನನ್ನು ಮಾಡುತ್ತಿದೆ ಎಂಬುದರ ಬಗ್ಗೆ ಜನರಿಗೆ ಅರಿವಿದೆ ಎಂದು ಹೇಳಿದ್ದಾರೆ.
ಜನರಿಗೆ ಅಗತ್ಯವಿರುವ ವಸ್ತುಗಳ ಮೇಲಿನ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಅನಗತ್ಯವಾಗಿ ಬಳಕೆ ಮಾಡುತ್ತಿರುವ ಹಣವನ್ನು ಬರ ಪೀಡಿತ ಪ್ರದೇಶಗಳಿಗೆ ನೀಡಿದ್ದರೆ ಜನರಿಗೆ ಸಹಾಯವಾಗುತ್ತಿತ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಮೋದಿ ಸರ್ಕಾರ 'ನಿರ್ಣಾಯಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ' ವಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, ವ್ಯಾಪಂ, ಲಲಿತ್ ಮೋದಿ ಹಾಗೂ ಬ್ಯಾಂಕ್ ಆಫ್ ಬರೋಡ ಹಗರಣಗಳ ಹೇಗೆ ಆದವು. ಗುಜರಾತ್ ನಲ್ಲು ಪೆಟ್ರೋಕೆಮಿಕಲ್ ನಿಗಮ 20 ಸಾವಿರ ಕೋಟಿಯನ್ನು ಬಳಕೆ ಮಾಡಿದೆ. ಇದು ಹಗರಣವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


