ದೇಶ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೇಲುಗೈ

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯು (ಸಿಬಿಎಸ್​ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಶನಿವಾರ...

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರೇ ಮೇಲುಗೈ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯು (ಸಿಬಿಎಸ್​ಇ) 10ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಶನಿವಾರ ಪ್ರಕಟಿಸಿದೆ. ಈ ಬಾರಿ ಶೇ.96.21 ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕಿಂತ ಫಲಿತಾಂಶ ಕಡಿಮೆಯಾಗಿದೆ. ಕಳೆದ ವರ್ಷ ಶೇ.97.32ರಷ್ಟು ಫಲಿತಾಂಶ ಬಂದಿತ್ತು. 
ಇನ್ನು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ.99.87ರಷ್ಟು ಫಲಿತಾಂಶ ಗಳಿಸಿ ತಿರುವನಂತಪುರಂ ಪ್ರಥಮ ಸ್ಥಾನದಲ್ಲಿದ್ದು, ಚೆನ್ನೈ ಶೇ.99.69ರಷ್ಟು ಫಲಿತಾಂಶ ಗಳಿಸಿ ಎರಡನೇ ಸ್ಥಾನದಲ್ಲಿದೆ. 
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮಂಡಳಿಯ ವೆಬ್​ಸೈಟ್ http://cbseresults.nic.in/ ಇದರಲ್ಲಿ ನೋಡಬಹುದು ಎಂದು ಮಂಡಳಿ ತಿಳಿಸಿದೆ.
ಈ ವರ್ಷ 10ನೇ ತರಗತಿ ಪರೀಕ್ಷೆಗೆ 14,91,293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.