2 ವರ್ಷಗಳಲ್ಲಿ ಅಧಿಕಾರಿಗಳು-ಮಧ್ಯವರ್ತಿಗಳ ನಡುವಿನ ಸಂಬಂಧ ಮುರಿದಿದ್ದೇವೆ: ಪರಿಕ್ಕರ್
ಕಳೆದ ಎರಡು ವರ್ಷಗಳಲ್ಲಿ ರಕ್ಷಣಾ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು, ಶಸ್ತ್ರಾಸ್ತ್ರ ಏಜೆಂಟರ ನಡುವೆ ಇದ್ದ ಸಂಬಂಧಕ್ಕೆ ಕತ್ತರಿ ಪ್ರಯೋಗ ಮಾಡಿದ್ದೇವೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ರಕ್ಷಣಾ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು, ಶಸ್ತ್ರಾಸ್ತ್ರ ಏಜೆಂಟರ ನಡುವೆ ಇದ್ದ ಸಂಬಂಧಕ್ಕೆ ಕತ್ತರಿ ಪ್ರಯೋಗ ಮಾಡಿದ್ದೇವೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಪಿಟಿಐ ಗೆ ಸಂದರ್ಶನ ನೀಡಿರುವ ರಕ್ಷಣಾ ಸಚಿವರು, ರಕ್ಷಣಾ ಇಲಾಖೆ ಬದಲಾವಣೆಯಗಿರುವುದರ ಕುರಿತು ಮಾತನಾಡಿದ್ದು, 2014 ರಲ್ಲಿ ತಾವು ಅಧಿಕಾರ ವಹಿಸಿಕೊಂಡಾಗ ಇಲಾಖೆಯ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವಂತಹ ನಿರ್ಧಾರಗಳನ್ನು ಕೈಗೊಳ್ಳಲು ಯಾರೂ ಸಿದ್ಧರಿರಲಿಲ್ಲ. ನಮ್ಮ ಅವಧಿಯಲ್ಲಿ ಮಧ್ಯವರ್ತಿಗಳು ಹಾಗು ಇಲಾಖೆಯ ಅಧಿಕಾರಿಗಳ ನಡುವೆ ಇದ್ದ ಸಂಬಂಧಕ್ಕೆ ಕತ್ತರಿ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆಯೂ ಮಾತನಾಡಿರುವ ಮನೋಹರ್ ಪರಿಕ್ಕರ್, ತನಿಖಾಧಿಕಾರಿಗಳು ತ್ವರಿತಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ರಕ್ಷಣಾ ಇಲಾಖೆ ಅಧಿಕಾರಿಗಳ ಮನಸ್ಥಿತಿಯಲ್ಲಿ ಬದಲಾವಣೆ ಕಂಡು ಬಂದಿದ್ದು ಈ ಹಿಂದೆ ದೂರವಿರಿಸುತ್ತಿದ್ದ ಕಡತಗಳ ಬಗ್ಗೆ ಋಣಾತ್ಮಕ ಅಭಿಪ್ರಾಯಗಳನ್ನು ನೀಡಲು ಅಧಿಕಾರಿಗಳು ಹಿಂದೇಟುಹಾಕುತ್ತಿಲ್ಲ ಇದು ರಕ್ಷಣಾ ಇಲಾಖೆಯಲ್ಲಿ ಕಂಡುಬಂದಿರುವ ಪ್ರಮುಖ ಬದಲಾವಣೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


