ದೇಶ

ರಾಷ್ಟ್ರಗೀತೆ ವೇಳೆ ಮೊಬೈಲ್ ಬಳಕೆ: ಕ್ಷಮೆಕೋರಿದ ಫಾರೂಕ್ ಅಬ್ದುಲ್ಲಾ

ರಾಷ್ಟ್ರಗೀತೆ ಹಾಡುವ ವೇಳೆ ಮೊಬೈಲ್ ಬಳಸಿದ್ದಕ್ಕೆ ಮುಖಂಡ ಫಾರೂಕ್ ಅಬ್ದುಲ್ಲಾ ಕ್ಷಮೆಯಾಚಿಸಿದ್ದಾರೆ.

ರಾಷ್ಟ್ರಗೀತೆ ವೇಳೆ ಮೊಬೈಲ್ ಬಳಕೆ: ಕ್ಷಮೆಕೋರಿದ ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Published On :

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಡುವ ವೇಳೆ ಮೊಬೈಲ್ ಬಳಸಿದ್ದಕ್ಕೆ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡ ಫಾರೂಕ್ ಅಬ್ದುಲ್ಲಾ ಕ್ಷಮೆಯಾಚಿಸಿದ್ದಾರೆ.

ರಾಷ್ಟ್ರಗೀತೆ ಹಾಡುವ ವೇಳೆಯಲ್ಲಿ ಎದ್ದು ನಿಂತಿದ್ದೆ, ರಾಷ್ಟ್ರಗೀತೆ ಬಗ್ಗೆ ಅಪಾರ ಗೌರವ ಇದೆ ಆದರೆ ಮೊಬೈಲ್ ನಲ್ಲಿ ಮಾತನಾಡಿರುವುದರಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಮಾಣ  ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ, ರಾಷ್ಟ್ರಗೀತೆ ಹಾಡುವ ವೇಳೆ ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಸ್ಪಷ್ಟವಾಗಿ ದಾಖಲಾಗಿತ್ತು. ಫಾರೂಕ್ ಅಬ್ದುಲ್ಲಾ ಅವರ ಬೇಜವಾಬ್ದಾರಿತನದ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಫಾರೂಕ್ ಅಬ್ದುಲ್ಲಾ ಕ್ಷಮೆ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.