ಪುದುಚೆರಿ ಮುಖ್ಯಮಂತ್ರಿಯಾಗಿ ನಾರಾಯಣಸಾಮಿ ಆಯ್ಕೆ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಕೇಂದ್ರ ಸಚಿವ ವಿ.ನಾರಾಯಣಸಾಮಿ ಪುದುಚೆರಿಯ...

Published On :
ಪುದುಚೆರಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಕೇಂದ್ರ ಸಚಿವ ವಿ.ನಾರಾಯಣಸಾಮಿ ಪುದುಚೆರಿಯ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪುದುಚೆರಿಯ ವೀಕ್ಷಕರಾಗಿದ್ದು, ಅವರು ನೂತನ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ನಾರಾಯಣಸಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ನಾರಾಯಣಸಾಮಿಯವರಿಗೆ ದೂರವಾಣಿ ಮೂಲಕ ಶುಭಾಶಯ ತಿಳಿಸಿದರು.
ನಾರಾಯಣಸಾಮಿಯವರ ಹೆಸರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ನಮಸ್ಸಿವಾಯಮ್ ಮತ್ತು ಮಾಜಿ ಮುಖ್ಯಮಂತ್ರಿ ವಿ. ವೈತಿಲಿಂಗಂ ಸೂಚಿಸಿದರು. ನಂತರ ಅಂತಿಮವಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದಿಸಿದರು.
ನಾರಾಯಣಸಾಮಿಯವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿಲ್ಲ. ಹಾಗಾಗಿ ಇನ್ನು ಆರು ತಿಂಗಳಲ್ಲಿ ಚುನಾವಣೆಗೆ ನಿಂತು ಗೆದ್ದು ಬರಬೇಕಿದೆ. 30 ಸದಸ್ಯರ ಪುದುಚೆರಿ ವಿಧಾನಸಭೆಯಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದುಕೊಂಡಿದ್ದು, ತನ್ನ ಮೈತ್ರಿ ಪಕ್ಷಗಳ ನೆರವಿನೊಂದಿಗೆ ಸರ್ಕಾರ ರಚನೆ ಮಾಡಲಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.