ರಸ್ತೆ ಅಪಘಾತದಲ್ಲಿ ಭಗತ್ ಸಿಂಗ್ ಮೊಮ್ಮಗನ ಸಾವು
ಹಿಮಾಚಲ ಪ್ರದೇಶದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಮೊಮ್ಮಗ ಅಭಿತೇಜ್ ಸಿಂಗ್ ಸಂಧು (22) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಮೊಮ್ಮಗ ಅಭಿತೇಜ್ ಸಿಂಗ್ ಸಂಧು (22) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಹಿಮಾಚಲ ಪ್ರದೇಶದ ರಾಮಪುರ ಬುಶಹರ್ನಲ್ಲಿ ಈ ದುರಂತ ಸಂಭವಿಸಿದ್ದು, ಭಗತ್ ಸಿಂಗ್ ಅವರ ಮೊಮ್ಮಗ ಅಭಿತೇಜ್ ಸಿಂಗ್ ಸಂಧು ಅವರ ಬೈಕ್ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಭಿತೇಜ್ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಅಭಿತೇಜ್ ಸಿಂಗ್ ಸಂಧು ಆಮ್ ಆದ್ಮಿ ಪಕ್ಷದ ಹಿಮಾಚಲಪ್ರದೇಶ ಘಟಕದ ಮುಖಂಡರು ಕೂಡ ಆಗಿದ್ದರು.
ಅಭಿತೇಜ್ ತಂದೆ ಅಭಯ್ ಸಿಂಗ್ ಅವರು ಭಗತ್ ಸಿಂಗ್ ಅವರ ಕಿರಿಯ ಪುತ್ರರಾಗಿದ್ದಾರೆ. ಇನ್ನು ಅಭಿತೇಜ್ ಅವರ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಗಣ್ಯರು ಕಂಬನಿ ಮಿಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬಕ್ಕೆ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


