ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿ ಕಿರಣ್ ಬೇಡಿ ಪ್ರಮಾಣ
ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರು ಭಾನುವಾರ ಪುದುಚೇರಿ ನೂತನ ಲೆಫ್ಟಿನೆಂಟ್ ...

Published On :
ಪುದುಚೇರಿ: ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರು ಭಾನುವಾರ ಪುದುಚೇರಿ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಜುಲೈ 2014ರಲ್ಲಿ ವಿರೇಂದ್ರ ಕಠಾರಿಯಾ ಅವರ ನಿವೃತ್ತಿಯ ನಂತರ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆ ಇದುವರೆಗೂ ಖಾಲಿ ಇತ್ತು. ಅಂಡಮಾನ್ ನಿಕೋಬಾರ್ ಲೆಫ್ಟಿನೆಂಟ್ ಗವರ್ನರ್ ಅಜಯ್ ಕುಮಾರ್ ಸಿಂಗ್ ಅವರಿಗೆ ಪುದುಚೇರಿ ಉಸ್ತುವಾರಿ ನೀಡಲಾಗಿದೆ. ಇದೀಗ ಆ ಸ್ಥಾನಕ್ಕೆ ಕೇಂದ್ರ ಸರ್ಕಾರ ಕಿರಣ್ ಬೇಡಿ ಅವರನ್ನು ನೇಮಕ ಮಾಡಿದೆ.
ಬೇಡಿ ಅವರು 30 ವರ್ಷಗಳ ಕಾಲ ಖಡಕ್ ಪೊಲೀಸ್ ಅಧಿಕಾರಿಯಾಗಿ ಖ್ಯಾತಿಗಳಿಸಿದ್ದರು. ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು. 2015 ರಲ್ಲಿ ದೆಹಲಿ ವಿಧಾನಸಭೆಗೆ ಬಿಜೆಪಿ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು.
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕೃಷಿ, ಶಿಕ್ಷಣ, ಪ್ರವಾಸೋದ್ಯಮ, ಹೆಲ್ತ್ ಕೇರ್, ಕೈಗಾರಿಕೆ, ಮಹಿಳಾ ಯೋಗಕ್ಷೇಮ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲಿ ಎನ್ನುವುದೇ ನನ್ನ ಬಯಕೆ ಎಂದು ಕಿರಣ್ ಬೇಡಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


