ದೇಶ

ರೈತರು ಬರಗಾಲದಿಂದ ಕಂಗಾಲು, ಮೋದಿ ಸರ್ಕಾರ ಹಾಡು ನೃತ್ಯಗಳಲ್ಲಿ ಬ್ಯುಸಿ: ರಾಹುಲ್ ಗಾಂಧಿ ಕಿಡಿ

ದೇಶದಲ್ಲಿ ರೈತರು ಬರಗಾಲದಿಂದ ಕಂಗಾಲಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಪ್ರಧಾನಮಂತ್ರಿ ಮೋದಿ ಸರ್ಕಾರ ಹಾಡು, ನೃತ್ಯಗಳೊಂದಿಗೆ ಸಂಭ್ರಮಾಚರಣೆಯಲ್ಲಿ ..

ರೈತರು ಬರಗಾಲದಿಂದ ಕಂಗಾಲು, ಮೋದಿ ಸರ್ಕಾರ ಹಾಡು ನೃತ್ಯಗಳಲ್ಲಿ ಬ್ಯುಸಿ: ರಾಹುಲ್ ಗಾಂಧಿ ಕಿಡಿ
ರಾಹುಲ್ ಗಾಂಧಿ
Published On :

ನವದೆಹಲಿ: ದೇಶದಲ್ಲಿ ರೈತರು ಬರಗಾಲದಿಂದ ಕಂಗಾಲಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಪ್ರಧಾನಮಂತ್ರಿ ಮೋದಿ ಸರ್ಕಾರ ಹಾಡು, ನೃತ್ಯಗಳೊಂದಿಗೆ ಸಂಭ್ರಮಾಚರಣೆಯಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ

ಪ್ರಧಾನಿ ಮೋದಿ ಸರಕಾರ ಎರಡು ವರ್ಷಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಸಂಭ್ರಮ ಆಚರಿಸುತ್ತಿದೆ. ದೇಶದಲ್ಲಿ ರೈತರು ಬರಗಾಲದಿಂದ ತತ್ತರಿಸಿ ಕಂಗಾಲಾಗಿದ್ದರೆ, ಮೋದಿ ಸರಕಾರ ಬಾಲಿವುಡ್ ನಟರೊಂದಿಗೆ ನೃತ್ಯ , ಹಾಡುಗಳೊಂದಿಗೆ ಸಂಭ್ರಮ ಆಚರಿಸುತ್ತಿದೆ ಎಂದು ಕಿಡಿಕಾರಿದರು.

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾರಾಷ್ಟ್ರದ ವಿಧರ್ಭ ಮತ್ತು ಮರಾಠವಾಡದಲ್ಲಿ ತಮ್ಮನ್ನು ತಾವೇ ಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಗೆ ತಲುಪಿದ್ದಾರೆ. ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಇಂಡಿಯಾ ಗೇಟ್ ಬಳಿ ಮೋದಿ ಸರ್ಕಾರ ಸಂಭ್ರಮದಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಸರ್ಕಾರ ಪ್ರತಿಯೊಂದು ಸಮಯದಲ್ಲೂ ಜನತೆಯನ್ನು ಮೂರ್ಖರನ್ನಾಗಿಸಬಹುದು ಎಂದು ತಿಳಿದುಕೊಂಡಿದೆ. ಆದರೆ, ದೇಶದ ಜನತೆಗೆ ನಿಧಾನವಾಗಿ ಮೋದಿ ಸರಕಾರ ನಡೆಯ ಬಗ್ಗೆ ಅರ್ಥವಾಗುತ್ತಿದೆ. ಕೇವಲ ಸುಳ್ಳು ಭರವಸೆಗಳ ಮೂಲಕ ಜನತೆಯ ಮನ ಗೆಲ್ಲಲು ಸಾಧ್ಯವಿಲ್ಲ ಎನ್ನುವುದು ಮೋದಿ ಸರ್ಕಾರ ಅರಿತರೆ ಒಳ್ಳೆಯದು ಎಂದು ಟಾಂಗ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.