ಪ್ರಧಾನಿ ಮೋದಿ ಅವರ 56 ಇಂಚಿನ ಎದೆ ಒಂದು ಇಂಚೂ ಸಹ ಕುಗ್ಗಿಲ್ಲ: ರಾಜನಾಥ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಅವರ ‘56 ಇಂಚಿನ ಎದೆ’ ಒಂದು ಇಂಚೂ ಸಹ ಕುಗ್ಗಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘56 ಇಂಚಿನ ಎದೆ’ ಒಂದು ಇಂಚೂ ಸಹ ಕುಗ್ಗಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಾಕಿಸ್ತಾನವನ್ನು ಎದುರಿಸಲು 56 ಇಂಚಿನ ಎದೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಅದರಂತೆ 2 ವರ್ಷಗಳ ನಂತರ ಸಹ ಅವರ ಎದೆಯ ಅಗಲ ಒಂದಿಂಚೂ ಸಹ ಕುಗ್ಗಿಲ್ಲ, ನನಗೆ ಗುಪ್ತಚರ ಮಾಹಿತಿಗಳು ಮತ್ತು ಅನೇಕ ರಹಸ್ಯ ಮಾಹಿತಿಗಳು ಗೊತ್ತು. ಅದರ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಾಕಿಸ್ತಾನವನ್ನು ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ ಎಂದು ಹೇಳಿರುವ ಅವರು ಪಾಕಿಸ್ತಾನಕ್ಕೆ ಭಯೋತ್ಪಾದಕರನ್ನು ಮಟ್ಟ ಹಾಕಲು ಸಾಧ್ಯವಾಗದಿದ್ದರೆ, ಭಾರತ ಮತ್ತು ಇತರ ದೇಶಗಳ ನೆರವು ಪಡೆಯಲಿ. ನಾವು ಭಯೋತ್ಪಾದಕರನ್ನು ನಿಯಂತ್ರಿಸಲು ಪಾಕಿಸ್ತಾನಕ್ಕೆ ನೆರವು ನೀಡಲು ಸದಾ ಸಿದ್ಧ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


