ಆಫ್ರಿಕನ್ ಪ್ರಜೆಗಳ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ರಾಜನಾಥ್ ಸಿಂಗ್ ಸೂಚನೆ
ದಕ್ಷಿಣ ದೆಹಲಿಯ ಮೂರು ಸ್ಥಳಗಳಲ್ಲಿ 7 ಆಫ್ರಿಕನ್ ಪ್ರಜೆಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ.....

Published On :
ನವದೆಹಲಿ: ದಕ್ಷಿಣ ದೆಹಲಿಯ ಮೂರು ಸ್ಥಳಗಳಲ್ಲಿ 7 ಆಫ್ರಿಕನ್ ಪ್ರಜೆಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.
ಈ ಸಂಬಂಧ ಇಂದು ದೆಹಲಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಮಾ ಅವರಿಗೆ ಕರೆ ಮಾಡಿ, ಆಫ್ರಿಕನ್ ಪ್ರಜೆಗಳ ಮೇಲೆ ನಡೆದ ದಾಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಕಳೆದ ಗುರುವಾರ ರಾತ್ರಿ ಆಫ್ರಿಕನ್ ಪ್ರಜೆಗಳ ಮೇಲೆ ದಾಳಿ ನಡೆಸಿದ್ದ 10 ಜನರ ಗುಂಪು, ಕ್ರಿಕೆಟ್ ಬ್ಯಾಟ್ ಮತ್ತು ಬಡಿಗೆಗಳಿಂದ ಅವರನ್ನು ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇನ್ನು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಈ ಇಂದು ಬೆಳಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೊಂದಿಗೆ ಚರ್ಚಿಸಿದ್ದು, ಹಲ್ಲೆಕೋರರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಇದು ಜನಾಂಗೀಯ ದಾಳಿ ಅಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು ,ದಾಳಿಗೆ ಸಂಬಂಧಿಸಿ ಕೆಲವರನ್ನು ಬಂಧಿಸಿ ದ್ದು, ಶೀಘ್ರ ಎಲ್ಲಾ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Policeಪೊಲೀಸ್Rajnath Singhಕಠಿಣ ಕ್ರಮstrict actionattacks on Africansಆಫ್ರಿಕನ್ನರ್ ಮೇಲೆ ಹಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


