ಅತಿ ವೇಗವಾಗಿ ಚಲಿಸುವ ವಾಹನಗಳ ಮೇಲೆ ನಿಗಾ ಇಡಲು ಡ್ರೋನ್ ಬಳಕೆ?
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗಮಿತಿಯನ್ನು ಉಲ್ಲಂಘಿಸಿ ಅತಿ ವೇಗವಾಗಿ ಚಲಿಸುವ ವಾಹನಗಳ ಮೇಲೆ ನಿಗಾ ಇಡಲು ಡ್ರೋನ್ ಬಳಕೆ ಮಾಡಲು ಕೇಂದ್ರ ಸಾರಿಗೆ ಸಚಿವಾಲಯದ ತಜ್ಞರ ಸಮಿತಿ ಸಲಹೆ ನೀಡಿದೆ.

ಚೆನ್ನೈ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗಮಿತಿಯನ್ನು ಉಲ್ಲಂಘಿಸಿ ಅತಿ ವೇಗವಾಗಿ ಚಲಿಸುವ ವಾಹನಗಳ ಮೇಲೆ ನಿಗಾ ಇಡಲು ಡ್ರೋನ್ ಬಳಕೆ ಮಾಡಲು ಕೇಂದ್ರ ಸಾರಿಗೆ ಸಚಿವಾಲಯದ ತಜ್ಞರ ಸಮಿತಿ ಸಲಹೆ ನೀಡಿದೆ.
ಹೆದ್ದಾರಿಗಳಲ್ಲಿ ಅತಿ ವೇಗದ ಚಾಲನೆ ಅಪಘಾತಗಳಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಅತಿ ವೇಗ ಗತಿಯ ಚಾಲನೆಯಲ್ಲಿರುವ ವಾಹನಗಳ ಮೇಲೆ ನಿಗಾ ಇಡುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಡ್ರೋನ್ ಕ್ಯಾಮರಾಗಳನ್ನು ಬಳಸಲು ಸಚಿವಾಲಯದ ತಜ್ಞರ ಸಮಿತಿ ಸಲಹೆ ನೀಡಿದೆ.
ಡ್ರೋನ್ ಬಳಕೆಯಿಂದ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ಗುರುತಿಸುವುದಕ್ಕೆ ಪೊಲೀಸರಿಗೆ ನೆರವಾಗಲಿದೆ ಎಂದು ತಜ್ಞರ ಸಮಿತಿ ಅಭಿಪ್ರಾಯಪಟ್ಟಿದ್ದು, ಹೆದ್ದಾರಿಗಳಲ್ಲಿ ಡ್ರೋನ್ ಬಳಕೆ ಉಪಯುಕ್ತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಚಲಿಸುತ್ತಿರುವ ವಾಹನಗಳ ಮೇಲೆ ಸೂಕ್ಷ್ಮವಾಗಿ ಗಮನ ಹರಿಸುವುದಕ್ಕೆ ಅನುಕೂಲವಾಗುವಂತೆ ಡ್ರೋನ್ ಗಳಿಗೆ ಕ್ಯಾಮರಾ ಅಳವಡಿಕೆ ಮಾಡಲಾಗಿರುತ್ತದೆ. ಈ ವರೆಗೂ ಡ್ರೋನ್ ಗಳನ್ನು ರಕ್ಷಣಾ ಇಲಾಖೆಯಲ್ಲಿ ಬಳಕೆ ಮಾಡಲಾಗುತ್ತಿತ್ತು. ತಜ್ಞರ ಸಮಿತಿ ಸಲಹೆಯ ಅಂಗೀಕಾರವಾದರೆ ಶೀಘ್ರವೇ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮೇಲೂ ಡ್ರೋನ್ ಕಣ್ಗಾವಲಿರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


