ಸರ್ಕಾರಿ ಆಸ್ಪತ್ರೆ ಯಡವಟ್ಟು: ಆಕ್ಸಿಜನ್ ಬದಲು ನೈಟ್ರಸ್ ಆಕ್ಸೈಡ್ ಪೂರೈಕೆ, ಮಗು ಸಾವು
ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಪ್ರತಿದಿನ ರೋಗಿಗಳು ಹಲವು ಸಮಸ್ಯೆಗಳನ್ನು ಅನುಭವಿಸುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಪುಷ್ಠಿ ನೀಡುವಂತ ...

ಇಂದೋರ್: ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಪ್ರತಿದಿನ ರೋಗಿಗಳು ಹಲವು ಸಮಸ್ಯೆಗಳನ್ನು ಅನುಭವಿಸುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಪುಷ್ಠಿ ನೀಡುವಂತ ಮತ್ತೊಂದು ಅನಾಹುತ ಮಧ್ಯಪ್ರದೇಶದ ಇಂದೋರ್ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ.
ಇಂಧೋರ್ ನ ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಮಗುವಿಗೆ ಆಮ್ಲಜನಕದ ಬದಲು ನೈಟ್ರಸ್ ಆಕ್ಸೈಡ್ ಪೂರೈಕೆಯಾಗಿ ಮಗು ಮೃತಪಟ್ಟಿದೆ. ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಮಗುವಿಗೆ ಆಮ್ಲಜನಕದ ಬದಲು ಅರಿವಳಿಕೆಗೆ ಬಳಕೆಯಾಗುವ ನೈಟ್ರಸ್ ಆಕ್ಸೈಡ್ ನೀಡಿರುವುದು ದುರಂತಕ್ಕೆ ಕಾರಣವಾಗಿದೆ.
ಐದು ವರ್ಷದ ಆಯುಶ್ ಮೃತಪಟ್ಟ ಮಗು. ಇದೇ ಆಸ್ಪತ್ರೆಯಲ್ಲಿ ಬೇರೆ ಯಾವುದೋ ಅನಿಲ ನೀಡಿದ ಕಾರಣ ಅಸ್ವಸ್ಥಗೊಂಡಿರುವ 18 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಶಸ್ತ್ರ ಚಿಕಿತ್ಸಾ ಕೊಠಡಿಯನ್ನು ಜಪ್ತಿ ಮಾಡಿದ್ದು, ಸಂಬಂಧಿಸಿದವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಶಸ್ತ್ರ ಚಿಕಿತ್ಸೆ ಕೊಠಡಿಯಲ್ಲಿ ಎರಡು ಪ್ರತ್ಯೇಕ ಬಣ್ಣಗಳ ಪೈಪ್‌ಗಳಿದ್ದು, ಅವುಗಳಲ್ಲಿ ಹರಿಯುವ ಅನಿಲ ಕಲಬೆರಕೆಗೊಂಡಿವೆ ಎಂದು ಶಸ್ತ್ರ ಚಿಕಿತ್ಸಕ ಉಮಿತ್ ಶುಕ್ಲಾ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


