ಸಂಸ್ಕೃತಿ, ಯೋಗ ಕೋರ್ಸ್; ಹಿಂದಿನ ನಿರ್ಧಾರದ ಮರುಪರಿಶೀಲನೆ- ಜೆಎನ್ ಯು
ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯ ಬಗ್ಗೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ತನ್ನ ನಿರ್ಧಾರವನ್ನು ಮರುಪರಿಶೀಲನೆ

ನವದೆಹಲಿ: ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯ ಬಗ್ಗೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ತನ್ನ ನಿರ್ಧಾರವನ್ನು ಮರುಪರಿಶೀಲಿಸಲುಮುಂದಾಗಿದೆ.
ಸಂಸ್ಕೃತಿ ಹಾಗೂ ಯೋಗದ ಬಗ್ಗೆ ಕೋರ್ಸ್ ಗಳನ್ನು ಪ್ರಾರಂಭಿಸುವುದರ ಬಗ್ಗೆ ಈ ಹಿಂದೆ ಜೆಎನ್ ಯು ಕೈಗೊಂಡಿದ್ದ ನಿರ್ಧಾರವನ್ನು ಮರುಪರಿಶೀಲನೆ ಮಾಡಲು ಇತ್ತೀಚೆಗಷ್ಟೇ ನಡೆದ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪರಿಷತ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪರಿಷತ್ ನ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಇದಕ್ಕೂ ಹಿಂದೆ ನಡೆದಿದ್ದ ಸಭೆಯಲ್ಲಿ( 2015 ರ ನವೆಂಬರ್) ನಲ್ಲಿ ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಕೆಲವು ಪ್ರಾಧ್ಯಾಪಕರಿಂದ ವಿರೋಧ ವ್ಯಕ್ತವಾಗಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿತ್ತು. ಆದರೆ ಯೋಗದ ಕುರಿತು ಅಲ್ಪಾವಧಿ ಕೋರ್ಸ್ ಗಳನ್ನು ಪ್ರಾರಂಭ ಮಾಡುವ ಪ್ರಸ್ತಾವನೆ ಮತ್ತೊಮ್ಮೆ ಚರ್ಚೆಗೆ ಬಂದಿದ್ದು ವಿಶ್ವವಿದ್ಯಾನಿಲಯದ ಉಪಕುಲಪತಿ ಜಗದೀಶ್ ಕುಮಾರ್ ಅಲ್ಪಾವಧಿ ಕೋರ್ಸ್ ಗಳ ಸ್ವರೂಪದ ಬಗ್ಗೆ ಸಲಹೆ-ಸೂಚನೆಗಳನ್ನು ನೀಡುವಂತೆ ಎಲ್ಲಾ ವಿಭಾಗಗಳಿಗೂ ನಿರ್ದೇಶನ ನೀಡಿದ್ದಾರೆ. ಭಾರತೀಯ ಸಂಸ್ಕೃತಿ ಹಾಗೂ ಯೋಗಕ್ಕೆ ಸಂಬಂಧಿಸಿದ ಕೋರ್ಸ್ ಗಳ ಈ ಹಿಂದಿನ ಕರಡಿನ ಪ್ರಕಾರ ಕೋರ್ಸ್ ಗಳ ಪಠ್ಯಗಳಲ್ಲಿ ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ವ್ಯವಸ್ಥೆ ಕುರಿತಾದ ಮಾಹಿತಿಯನ್ನು ಅಳವಡಿಸಬೇಕೆಂಬ ಪ್ರಸ್ತಾವನೆ ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


