ಅಪ್ರಾಪ್ತೆ ಮೇಲೆ ಅತ್ಯಾಚಾರ: ಹತ್ಯೆಗೈದು ಮರಕ್ಕೆ ನೇತು ಹಾಕಿ ಪೈಶಾಚಿಕ ಕೃತ್ಯ
ಹದಿನೈದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕರು, ಆಕೆಯನ್ನು ಹತ್ಯೆ ಮಾಡಿ ಮರಕ್ಕೆ ನೇತು ಹಾಕಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದಲ್ಲಿ .,..

ಲಕ್ನೋ: ಹದಿನೈದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕರು, ಆಕೆಯನ್ನು ಹತ್ಯೆ ಮಾಡಿ ಮರಕ್ಕೆ ನೇತು ಹಾಕಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಕ್ನೋದಿಂದ 160 ಕಿಮೀ ದೂರದಲ್ಲಿರುವ ನನ್ಪರಾದಿಂದ ಅದೇ ಗ್ರಾಮದ ಮೂವರು ಬಾಲಕಿಯನ್ನು ಅಪಹರಿಸಿದ್ದರು. ಇದು ಆತ್ಮಹತ್ಯೆ ಎಂದು ಬಿಂಬಿಸುವ ಸಲುವಾಗಿ ಮರಕ್ಕೆ ಶವವನ್ನು ನೇತು ಹಾಕಿದ್ದಾರೆ ಎಂದು ಬಾಲಕಿಯ ಪೊಷಕರು ಆರೋಪಿಸಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಅತ್ಯಾಚಾರವಾಗಿದೆ ಎಂಬುದನ್ನು ಖಚಿತ ಪಡಿಸಿರುವ ಪೊಲೀಸರು ಇದುವರೆಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ.
ಇನ್ನು ಘಟನೆ ಬಗ್ಗೆ ಮಹಿಳಾ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರ ಎರಡು ವರ್ಷದ ಸಾಧನಾ ಸಮಾವೇಶ ನಡೆಸುತ್ತಿದೆ. ಆದರೆ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


