ಆಯೋಧ್ಯ ವಿವಾದ: ಸಮಸ್ಯೆ ಇತ್ಯರ್ಥಕ್ಕೆ ಹಿಂದೂ-ಮುಸ್ಲಿಂ ನಾಯಕರಿಂದ ಸಭೆ
ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಹಿಂದೂ...

Published On :
ಆಯೋದ್ಯಾ: ರಾಮಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಹಿಂದೂ ಮತ್ತು ಮುಸ್ಲಿಂ ನಾಯಕರು ನಿನ್ನೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಮಮಂದಿ ಮತ್ತು ಬಾಬ್ರಿ ಮಸೀದಿ ನಿರ್ಮಾಣದ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಭೆ ನಡೆಸಲಾಯಿತು ಎಂದು ಅಖಿಲ ಭಾರತ ಅಖಾರ ಪರಿಷದ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರು ತಿಳಿಸಿದ್ದಾರೆ.
ನಿನ್ನೆ ಗಿರಿ ಅವರು ಬಾಬ್ರಿ ಮಸೀದಿ ಪರವಾಗಿ ಹೋರಾಟ ನಡೆಸುತ್ತಿರುವ ಹಶೀಮ್ ಅನ್ಸಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಗಿರಿ ಅವರಿಗೆ ಸಾಧುಗಳು ಸೇರಿದಂತೆ ಇತರೆ ಹಿಂದೂ ನಾಯಕರು ಸಾಥ್ ನೀಡಿದ್ದರು. ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎರಡು ಧರ್ಮದವರು ವಿವಾದವನ್ನು ಶಾಂತಿಯಿಂದ ಬಗೆಹರಿಸಿಕೊಳ್ಳಬೇಕು ಎಂದು ಬಯಸುತ್ತಿವೆ. ಎರಡು ಧರ್ಮಗಳು ಒಪ್ಪಿಕೊಳ್ಳುವಂತೆ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬೇಕಿದೆ. ಅಲ್ಲದೇ ಸುಪ್ರೀಂ ಕೋರ್ಟ್ ಈ ಪ್ರಕರಣ ಕುರಿತು ಪ್ರತಿ ದಿನ ವಿಚಾರಣೆ ನಡೆಸಬೇಕು ಎಂದು ಗಿರಿ ಹೇಳಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಯಿಸಿದ ಅನ್ಸಾರಿ, ನಾವು ಮಾತುಕತೆಗೆ ಸಿದ್ಧವಿದ್ದೇವೆ. ಎರಡು ಸಮುದಾಯಗಳು ಸಂತೋಷದಿಂದ ಶಾಂತಿಯುತವಾಗಿ ವಿವಾದವನ್ನು ಬಗೆಹರಿಸಿಕೊಳ್ಳಬೇಕೆಂಬುದೇ ನಮ್ಮ ಇಚ್ಚೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


