ಜಾಟ್ ಪ್ರತಿಭಟನೆ ಸಂದರ್ಭ ಸಾಮೂಹಿಕ ಅತ್ಯಾಚಾರ ನಡೆದಿದೆ: ಪ್ರಕಾಶ್ ಸಿಂಗ್ ಸಮಿತಿ ವರದಿ
ಹರ್ಯಾಣದಲ್ಲಿ ಜಾಟ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಯ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿರುವುದನ್ನು ಪ್ರಕಾಶ್ ಸಿಂಗ್ ಸಮಿತಿ ವರದಿ ದೃಢಪಡಿಸಿದೆ.

ಚಂಡೀಗಢ: ಹರ್ಯಾಣದಲ್ಲಿ ಜಾಟ್ ಸಮುದಾಯದವರು ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ ಬೃಹತ್ ಪ್ರತಿಭಟನೆಯ ವೇಳೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ಪ್ರಕಾಶ್ ಸಿಂಗ್ ಸಮಿತಿ ವರದಿ ದೃಢಪಡಿಸಿದೆ.
ಜಾಟ್ ಸಮುದಾಯದ ಪ್ರತಿಭಟನೆಯಲ್ಲಿ ನಡೆದ ಹಿಂಸಾಚಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ಪ್ರಕಾಶ್ ಸಿಂಗ್ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ದೃಢಪಡಿಸಿದೆ. ಹಿಂಸಾಚಾರ ನಡೆದ ಸಂದರ್ಭದಲ್ಲಿ ಮುರ್ಥಾಲ್ ನಲ್ಲಿ ಹಲವು ಮಹಿಳೆಯರನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.
ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ ಮುರ್ಥಾಲ್ ನಲ್ಲಿರುವ ಡಾಬಾದಲ್ಲಿ ಆಶ್ರಯ ನೀಡಲಾಯಿತು. ಈ ವೇಳೆ ಹಲವು ಮಹಿಳೆಯರ ವಸ್ತ್ರಗಳು ಸಹ ಹರಿದುಹೋಗಿದ್ದರಿಂದ ವಸ್ತ್ರಗಳನ್ನು ನೀಡಿ ಮನೆಗೆ ತಲುಪಿಸಲಾಯಿತು ಎಂದು ಡಾಬಾ ಮಾಲಿಕರ ಹೇಳಿಕೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸತತ 9 ದಿನಗಳು ನಡೆದ ಜಾಟ್ ಪ್ರತಿಭಟನೆಯ ಸಂದರ್ಭದಲ್ಲಿ 10 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿತ್ತು. ಅತ್ಯಾಚಾರ ಪ್ರಕರಣಗಳೂ ಸೇರಿದಂತೆ ಹಿಂಸಾಚಾರ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಪ್ರಕಾಶ್ ಸಿಂಗ್ ಸಮಿತಿಯನ್ನು ರಚಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


