ರಾಜ್ಯಸಭೆ ಚುನಾವಣೆಗೆ ಆಂಧ್ರದಿಂದ ನಾಮಪತ್ರ ಸಲ್ಲಿಸಿದ ಸುರೇಶ್ ಪ್ರಭು
ರೇಲ್ವೆ ಸಚಿವ ಸುರೇಶ್ ಪ್ರಭು ಅವರು ಮಂಗಳವಾರ ರಾಜ್ಯಸಭೆ ಚುನಾವಣೆಗೆ ಆಂಧ್ರಪ್ರದೇಶದಿಂದ ಟಿಡಿಪಿ-ಬಿಜೆಪಿ ಮೈತ್ರಿಕೂಟದ...

Published On :
ವಿಜಯವಾಡ: ರೇಲ್ವೆ ಸಚಿವ ಸುರೇಶ್ ಪ್ರಭು ಅವರು ಮಂಗಳವಾರ ರಾಜ್ಯಸಭೆ ಚುನಾವಣೆಗೆ ಆಂಧ್ರಪ್ರದೇಶದಿಂದ ಟಿಡಿಪಿ-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲಿಸಿದರು.
ಇನ್ನು ಇತರೆ ಎರಡು ರಾಜ್ಯಸಭಾ ಸ್ಥಾನಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ವೈ ಸತ್ಯನಾರಯಣ ಚೌಧರಿ ಹಾಗೂ ಮಾಜಿ ಸಚಿವ ಟಿ.ಜಿ.ವೆಂಕಟೇಶ್ ಅವರು ಸಹ ಟಿಡಿಪಿಯಿಂದ ಉಮೇದುವಾರಿಕೆ ಸಲ್ಲಿಸಿದರು.
ಈ ವೇಳೆ ನಾಗರಿಕ ವಿಮಾನಯಾನ ಖಾತೆ ಸಚಿವ ಪಿ ಅಶೋಕ್ ಗಜಪತಿ ರಾಜು, ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥ ಕೆ.ಹರಿಬಾಬು, ರಾಜ್ಯ ಹಣಕಾಸು ಸಚಿವ ಯನಮಲ ರಾಮಕೃಷ್ಣ ಹಾಗೂ ಆರೋಗ್ಯ ಸಚಿವ ಕೆ.ಶ್ರೀನಿವಾಸ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Andhra PradeshSuresh Prabhuಸುರೇಶ್ ಪ್ರಭುnominationಆಂಧ್ರಪ್ರದೇಶನಾಮಪತ್ರರಾಜ್ಯಸಭೆ ಚುನಾವಣೆRajya Sabha polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


